ದಿನದ ಸುದ್ದಿ
ದಾವಣಗೆರೆ | ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/03/corona_virus_suddidina-65.jpg&description=ದಾವಣಗೆರೆ | ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/03/corona_virus_suddidina-65.jpg&description=ದಾವಣಗೆರೆ | ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ: ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದ್ದು, ಜಿಲ್ಲೆಗೆ ಕೋವಿಡ್ ವಾರ್ ರೂಂನಿಂದ ಜೂ.19 ರಂದು ಕ್ವಾರಂಟೈನ್ ಉಲ್ಲಂಘನೆ ಮಾಡಿದ ಜನರ ಬಗ್ಗೆ ಮಾಹಿತಿ ಹಾಗೂ ವಿವರಗಳು ಸ್ವೀಕೃತವಾಗಿರುತ್ತವೆ.
ಈ ಹಿನ್ನೆಲೆಯಲ್ಲಿ ಇವರ ಬಗ್ಗೆ ಜಿಲ್ಲಾ ವಾರ್ ರೂಂನಿಂದ ಅವರು ನೀಡಿರುವ ನಂಬರ್‍ಗಳಿಗೆ ಫೋನ್ ಮೂಲಕ ಪರಿಶೀಲಿಸಿದಾಗ ಹೋಂ ಕ್ವಾರಂಟೈನ್‍ಗೆ ಒಳಗಾದ ಕೆಲವು ವ್ಯಕ್ತಿಗಳು ನಿಯಮ ಮೀರಿ ಮನೆಯಿಂದ ಹೊರಗೆ ಓಡಾಡುತ್ತಿರುವುದು ಕಂಡುಬಂದಿದೆ. ಈ ರೀತಿ ಹೋಂ ಕ್ವಾರಂಟೈನ್‍ನಿಂದ ಹೊರಗೆ ಓಡಾಡುವುದು ಅಥವಾ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುವುದು ಅಪರಾಧವಾಗಿದೆ.
ಹೋಂ ಕ್ವಾರಂಟೈನ್‍ನಲ್ಲಿದ್ದು, ಉಲ್ಲಂಘನೆ ಮಾಡಿದವರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಾಂಸ್ಥಿಕ ಕ್ವಾರಂಟೈನ್‍ಗೆ ಇಡಲಾಗುವುದು. ಈ ಬಗ್ಗೆ ನಿಯಾಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ದಾಖಲಿಸಲು ಕೋರಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

