ದಿನದ ಸುದ್ದಿ

ದಾವಣಗೆರೆ | ಹೋಂ ಕ್ವಾರಂಟೈನ್ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ

Published

on

ಸುದ್ದಿದಿನ,ದಾವಣಗೆರೆ: ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗುತ್ತಿದ್ದು, ಜಿಲ್ಲೆಗೆ ಕೋವಿಡ್ ವಾರ್ ರೂಂನಿಂದ ಜೂ.19 ರಂದು ಕ್ವಾರಂಟೈನ್ ಉಲ್ಲಂಘನೆ ಮಾಡಿದ ಜನರ ಬಗ್ಗೆ ಮಾಹಿತಿ ಹಾಗೂ ವಿವರಗಳು ಸ್ವೀಕೃತವಾಗಿರುತ್ತವೆ.

ಈ ಹಿನ್ನೆಲೆಯಲ್ಲಿ ಇವರ ಬಗ್ಗೆ ಜಿಲ್ಲಾ ವಾರ್ ರೂಂನಿಂದ ಅವರು ನೀಡಿರುವ ನಂಬರ್‍ಗಳಿಗೆ ಫೋನ್ ಮೂಲಕ ಪರಿಶೀಲಿಸಿದಾಗ ಹೋಂ ಕ್ವಾರಂಟೈನ್‍ಗೆ ಒಳಗಾದ ಕೆಲವು ವ್ಯಕ್ತಿಗಳು ನಿಯಮ ಮೀರಿ ಮನೆಯಿಂದ ಹೊರಗೆ ಓಡಾಡುತ್ತಿರುವುದು ಕಂಡುಬಂದಿದೆ. ಈ ರೀತಿ ಹೋಂ ಕ್ವಾರಂಟೈನ್‍ನಿಂದ ಹೊರಗೆ ಓಡಾಡುವುದು ಅಥವಾ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಹೋಗುವುದು ಅಪರಾಧವಾಗಿದೆ.

ಹೋಂ ಕ್ವಾರಂಟೈನ್‍ನಲ್ಲಿದ್ದು, ಉಲ್ಲಂಘನೆ ಮಾಡಿದವರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸಾಂಸ್ಥಿಕ ಕ್ವಾರಂಟೈನ್‍ಗೆ ಇಡಲಾಗುವುದು. ಈ ಬಗ್ಗೆ ನಿಯಾಮಾನುಸಾರ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ದಾಖಲಿಸಲು ಕೋರಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version