ದಿನದ ಸುದ್ದಿ
ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಅಗತ್ಯ – ಪತ್ರಕರ್ತ ಜಿ.ಎಂ.ಆರ್ ಆರಾಧ್ಯ
ಸುದ್ದಿದಿನ,ದಾವಣಗೆರೆ : ಜಾತಿ, ಮತ, ಧರ್ಮಗಳಿಗಿಂತಲೂ ನಾವು ಭಾರತೀಯರೆಂಬ ಅಭಿಮಾನವೇ ಶ್ರೇಷ್ಠ. ಭಾರತ ಜಗತ್ತಿಗೇ ಮಾದರಿಯಾದ ದೇಶವಾಗಿದೆ. ಇಂತಹ ದೇಶದ ಗೌರವ ಕಾಪಾಡುವುದು ವಿದ್ಯಾರ್ಥಿಗಳು ಮತ್ತು ಯುವಜನತೆಯ ಕರ್ತವ್ಯವಾಗಬೇಕು ಎಂದು ನಗರದ ಜನಮಿಡಿತ ಪತ್ರಿಕೆಯ ಸಂಪಾದಕರು ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಹಿರಿಯ ಪತ್ರಕರ್ತರಾದ ಜಿ.ಎಂ.ಆರ್ ಆರಾಧ್ಯ ಹೇಳಿದರು.
ನಗರದ ವಿರಕ್ತಮಠದ ಆವರಣದಲ್ಲಿ ದಿ ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಇಂದು ( ದಿ : 28/11/2018 ) ಬೆಳಗ್ಗೆ 11 ಗಂಟೆಗೆ ಆಯೋಜಿಲಾಗಿದ್ದ ಗೌರವ ಸನ್ಮಾನ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದಿಂದ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿರುವ ಹಿನ್ನೆಲೆಯಲ್ಲಿ ಅಕಾಡೆಮಿಯಿಂದ ನೀಡಲಾದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶ, ಭಾಷೆ, ಸಂಸ್ಕøತಿಯ ಹಿರಿಮೆ – ಗರಿಮೆ ಉಳಿಸುವ ನಿಟ್ಟಿನಲ್ಲಿ ಹಾಗೂ ದೇಶದ ಘನತೆ ಕಾಪಾಡುವ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗಂಗಾಧರ ಬಿ.ಎಲ್ ನಿಟ್ಟೂರ್ ಅವರು ಸಂಸ್ಕøತಿಯ ಅರಿವು ಮತ್ತು ವ್ಯಕ್ತಿತ್ವ ವಿಕಸನ ಕುರಿತು ಉಪನ್ಯಾಸ ನೀಡುತ್ತಾ, ನಮ್ಮ ನಾಡು-ನುಡಿ, ಭಾಷೆ, ಪರಂಪರೆ ಮತ್ತು ಸಂಸ್ಕøತಿಯ ಅರಿವು ಮೂಡಿಸಿ ಹೊಸ ಕಲಿಕೆಗೆ ಪ್ರೇರಣೆ ನೀಡುವುದೇ ಶ್ರೇಷ್ಠ ಶಿಕ್ಷಣ. ಪಠ್ಯಗಳು ವಿದ್ಯಾರ್ಥಿಗಳ ಮನಸ್ಸನ್ನು ಅರಳಿಸಿ ಅವರಲ್ಲಿ ಉದಾತ್ತ ಚಿಂತನೆ ಮತ್ತು ಶ್ರೇಷ್ಠ ಸಂಸ್ಕಾರ ಬೆಳೆಸುವಂತಿರಬೇಕು ಎಂದರು.
ನಮ್ಮ ಅಕ್ಕಪಕ್ಕದಲ್ಲಿಯೇ ಸಾಕಷ್ಟು ಶ್ರಮಜೀವಿಗಳು ತಮ್ಮ ಜೀವನವನ್ನು ಅವಿರತ ಪರಿಶ್ರಮದಿಂದ ಸಾರ್ಥಕಪಡಿಸಿಕೊಳ್ಳುತ್ತಿದ್ದಾರೆ. ಅವರೇ ನಿಜವಾದ ಚಾಲೆಂಜಿಂಗ್ ಸಾರ್‍ಗಳು. ಅಂತಹ ಸಾಧಕರು ನಮಗೆ ಮಾದರಿಯಾಗಬೇಕು ಹೊರತು ಸಿನಿಮಾ ನಟರಲ್ಲ ಎಂದು ಕಿವಿಮಾತು ಹೇಳಿದರು.
ವನಿತ ಸಾಹಿತ್ಯ ಶ್ರೀ ಪ್ರಶಸ್ತಿ ಪುರಸ್ಕøತ ಶೈಲಜಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಶ್ರೀ ಬಸವಪ್ರಭು ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ನಿರ್ದೇಶಕ ಬಿ.ಮಂಜುನಾಥ್ ವಹಿಸಿದ್ದರು. ಅಕಾಡೆಮಿಯ ಸಂಸ್ಥಾಪಕ ಕಾರ್ಯದರ್ಶಿ ಎನ್.ಕೆ ಕೊಟ್ರೇಶ್ ಪ್ರಾಸ್ತಾವಿಕ ನುಡಿಯಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಎಸ್‍ಜೆಎಂ ಶಾಲೆಯ 8 ರಿಂದ 10ನೇ ತರಗತಿಯ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಹೊಲಿಗೆ, ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
-
ದಿನದ ಸುದ್ದಿ4 days ago
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ6 days ago
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
-
ದಿನದ ಸುದ್ದಿ2 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ7 days ago
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ4 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ
-
ದಿನದ ಸುದ್ದಿ2 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ