ದಿನದ ಸುದ್ದಿ
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ವ್ಯಾಪ್ತಿಯಲ್ಲಿರುವ ಈ ಕೆಳಗಿನ ನಗರಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಚನ್ನಗಿರಿ ಪಟ್ಟಣ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾಗಿದೆ.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ಮಾಡಲಿರುವ ದಾವಣಗೆರೆಯ ನಗರಗಳಾದ ಎಸ್.ಎಸ್.ಎಂ. ನಗರ ಅಂದಾಜು ಪಡಿತರ ಚೀಟಿಗಳು, 53-ಅಂತ್ಯೋದಯ, 770-ಬಿಪಿಎಲ್(ಅಕ್ಷಯ), ಎಪಿಎಲ್-04 ಒಟ್ಟು 827 ಹಾಗೂ ಭಾಷಾನಗರ ಪಡಿತರ ಚೀಟಿಗಳು, 95-ಅಂತ್ಯೋದಯ, 830-ಬಿಪಿಎಲ್(ಅಕ್ಷಯ), ಎಪಿಎಲ್-02 ಒಟ್ಟು 927.
ಶಿವಾಜಿನಗರ ಪಡಿತರ ಚೀಟಿಗಳು, 66-ಅಂತ್ಯೋದಯ, 1000-ಬಿಪಿಎಲ್(ಅಕ್ಷಯ), ಎಪಿಎಲ್-125 ಒಟ್ಟು 1191 ಮತ್ತು ಶ್ರೀ ದುರ್ಗಾಂಬಿಕ ಬಡಾವಣೆ ನಿಟ್ಟುವಳ್ಳಿ ಪಡಿತರ ಚೀಟಿಗಳು, 35-ಅಂತ್ಯೋದಯ, 796-ಬಿಪಿಎಲ್(ಅಕ್ಷಯ), ಎಪಿಎಲ್-169 ಒಟ್ಟು 1000, ಕೊಟ್ಟೂರೇಶ್ವರ ಬಡಾವಣೆ ಸೇರ್ಪಡೆಗೊಳ್ಳುವ ಪಡಿತರ ಚೀಟಿಗಳು, 25-ಅಂತ್ಯೋದಯ, 925-ಬಿಪಿಎಲ್(ಅಕ್ಷಯ), ಎಪಿಎಲ್-50 ಒಟ್ಟು 1000.
ಎಸ್.ಜೆ.ಎಂ ನಗರ ಸೇರ್ಪಡೆಗೊಳ್ಳುವ ಪಡಿತರ ಚೀಟಿಗಳು, 60-ಅಂತ್ಯೋದಯ, 85-ಬಿಪಿಎಲ್(ಅಕ್ಷಯ), ಎಪಿಎಲ್-05 ಒಟ್ಟು 915 ಬ್ಯಾಂಕ್ ಠೇವಣಿ ಮೊತ್ತ ಒಂದು ತಿಂಗಳಿಗೆ ಪಡಿತರ ಎತ್ತುವಳಿಗೆ ಬೇಕಾಗುವ ಮೊತ್ತ ಕನಿಷ್ಠ ರೂ.50,000 ಇರುತ್ತದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪಾನ್ನ ಸಹಕಾರ ಸಂಘ/ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್ ಹಾಗೂ ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇವರಿಗೆ ಸಲ್ಲಿಸತಕ್ಕದ್ದು, ಬೇರೆ ಕಚೇರಿಯಿಂದ ಅರ್ಜಿ ಸಲ್ಲಿಸಬಾರದು, ನಿಗಧಿತ ಅರ್ಜಿ ನಮೂನೆಯನ್ನು ಕಚೇರಿ ಅಥವಾ ತಹಶೀಲ್ದಾರ್, ಹೊನ್ನಾಳಿ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು
ಅರ್ಜಿ ನಮೂನೆ ‘ಎ’ ಸಹಕಾರ ಸಂಘ/ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋದಾವಣೆ ಪತ್ರ, ಕಳೆದ 3 ವರ್ಷಗಳ ದೃಡಿಕರಣ ಲೆಕ್ಕ ಪರಿಶೋಧನಾ ವರದಿ ಮತ್ತು ಉಪನಿಯಮಗಳು(ಬೈಲಾ), ಹಾಗೂ ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಿರ್ಣಯ, ಕರ್ನಾಟಕ ಸೊಸೈಟೀಸ್ ರಿಜೀಸ್ಟ್ರೇಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಟೇಷನ್ ನಡವಳಿ ನಡೆದಿರುವುದಿಲ್ಲ.
ಇದರ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಡೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ/ಕರಾರು ಪತ್ರ, ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ(ನಿಯಂತ್ರಣ) ಆದೇಶ 2018 ರಲ್ಲಿ ಆದ್ಯತೆಗಳನ್ನು ಪರಿಗಣಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

