Connect with us

ದಿನದ ಸುದ್ದಿ

ದಾವಣಗೆರೆ | ಪಾಲಿಕೆ ಉಪಚುನಾವಣೆ ವೇಳಾಪಟ್ಟಿ ಪ್ರಕಟ : 20 ಮತ್ತು 22 ನೇ ವಾರ್ಡಿಗೆ ಉಪ ಚುನಾವಣೆ

Published

on

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ಆದೇಶದಂತೆ 1976ರ ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮದ ಉಪಬಂಧಗಳ ಅಡಿಯಲ್ಲಿ ಸ್ಥಾಪಿತವಾದ ದಾವಣಗೆರೆ ಮಹಾನಗರ ಪಾಲಿಕೆಯ 20 ಮತ್ತು 22ನೇ ವಾರ್ಡ್‍ಗಳಲ್ಲಿ ಚುನಾಯಿತ ಸದಸ್ಯರುಗಳ ರಾಜಿನಾಮೆಯಿಂದ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆ ನಡೆಸಲಾಗುತ್ತಿದ್ದು, ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ನಗರದ 20ನೇ ವಾರ್ಡ್‍ನ ಭಾರತ್ ಕಾಲೋನಿಯಲ್ಲಿ ಪರಿಶಿಷ್ಟ ಪಂಗಡ (ಮಹಿಳೆ) ಹಾಗೂ 22ನೇ ವಾರ್ಡ್‍ನ ಯಲ್ಲಮ್ಮ ನಗರದಲ್ಲಿ ಸಾಮಾನ್ಯ ಮೀಸಲಾತಿ ನೀಡಲಾಗಿದ್ದು, ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ (ಎಲೆಕ್ಷನ್) ನಿಯಮಗಳು 1979 ರ ನಿಯಮ 10ರ ಅನುಸಾರವಾಗಿ ಚುನಾವಣೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಈ ಕೆಳಗಿನಂತೆ ನಿಗದಿಪಡಿಸಿರುತ್ತಾರೆ.

ನಾಮಪತ್ರಗಳನ್ನು ಸಲ್ಲಿಸಲು ಮಾ.17 ರ ಬುಧವಾರ ಕೊನೆಯ ದಿನಾಂಕವಾಗಿದೆ. ಮಾ.18 ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕವಾಗಿದೆ. ಮಾ.20 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿರುತ್ತದೆ. ಮತದಾನ ಅವಶ್ಯವಿದ್ದರೆ, ಮತದಾನವನ್ನು ಮಾ.29 ರ ಸೋಮವಾರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸುವ ದಿನವಾಗಿದೆ. ಮಾ.31 ಮತ ಎಣಿಕೆ ದಿನಾಂಕ ಮತ್ತು ಚುನಾವಣಾ ಮುಕ್ತಾಯ ದಿನಾಂಕವಾಗಿದೆ.

ಇದನ್ನೂ ಓದಿ | ದೊಡ್ಡಘಟ್ಟ | ಮಾ.14ರಂದು ‘ಸಾಮರಸ್ಯ ಸಂಭ್ರಮ ವೇದಿಕೆ’ಯಿಂದ ವಿಷೇಶ ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ

ಚುನಾವಣಾಧಿಕಾರಿಗಳ ವಿವರ

ವಾರ್ಡ್ ನಂ.20 ಕ್ಕೆ ಚುನಾವಣಾಧಿಕಾರಿಯಾಗಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಲಕ್ಷ್ಮೀಕಾಂತ ಬೊಮ್ಮಣ್ಣನವರ್(ಮೊ.ಸಂ: 9448999219) ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಬೀಜ ಪರೀಕ್ಷಾ ಪ್ರಯೋಗಾಲಯ ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್ ನಾಯ್ಕ್.ವಿ(8277931264) ಅವರನ್ನು ನೇಮಿಸಲಾಗಿದ್ದು, ಇವರ ಕಚೇರಿಯು ಮಹಾನಗರಪಾಲಿಕೆಯ ಕೊಠಡಿ ಸಂಖ್ಯೆ 2 ರಲ್ಲಿರುತ್ತದೆ.

ವಾರ್ಡ್ ನಂ.22 ಕ್ಕೆ ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿಗಳಾದ ಮಮತ ಹೊಸಗೌಡರ್ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಗ್ರೇಡ್-2 ಗಿರೀಶ್ ಬಾಬು ಅವರನ್ನು ನೇಮಿಸಲಾಗಿದ್ದು, ಪಾಲಿಕೆಯ ಕೊಠಡಿ ಸಂಖ್ಯೆ 3 ರಲ್ಲಿ ಇವರ ಕಚೇರಿ ಇರುತ್ತದೆ.

ಸದಾಚಾರ ಸಂಹಿತೆ ಅನುಷ್ಟಾನ ತಂಡದ ವಿವರ

ಮಹಾನಗರಪಾಲಿಕೆ 20 ಮತ್ತು 22ನೇ ವಾರ್ಡ್ ವ್ಯಾಪ್ತಿಯ ಸದಾಚಾರ ಸಂಹಿತೆಯ ನೋಡಲ್ ಅಧಿಕಾರಿಯಾಗಿ ಪಾಲಿಕೆ ಆಯುಕ್ತರು ಹಾಗೂ ಸದಾಚಾರ ಸಹಾಯಕ ನೋಡಲ್ ಅಧಿಕಾರಿಯಾಗಿ ಸಂಬಂಧಿಸಿದ ವಾರ್ಡ್‍ನ ಕಂದಾಯ ಅಧಿಕಾರಿಗಳು ಮತ್ತು ಸದಾಚಾರ ಸಂಹಿತೆಯ ಅನುಷ್ಠಾನಾಧಿಕಾರಿಯಾಗಿ ಸಂಬಂಧಿಸಿದ ವಾರ್ಡ್‍ನ ಬಿಲ್ ಕಲೆಕ್ಟರ್ ಗಳನ್ನು ನೇಮಿಸಲಾಗಿದೆ.

ಮತಗಟ್ಟೆ ಮತ್ತು ಮತದಾರರ ವಿವರ

ವಾರ್ಡ್ ಸಂಖ್ಯೆ 20 ಮತ್ತು 22 ಸೇರಿ ಒಟ್ಟು 15 ಮತಗಟ್ಟೆಗಳಿದ್ದು, 7638 ಪುರುಷರು ಹಾಗೂ 7443 ಮಹಿಳೆಯರು ಸೇರಿದಂತೆ ಒಟ್ಟು 15081 ಮತದಾರರಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳ ವಿವರ

ಮತದಾನದ ಉದ್ದೇಶಕ್ಕಾಗಿ 15 ಬಿ.ಯು, 15 ಸಿಯು, ತರಬೇತಿಯ ಉದ್ದೇಶಕ್ಕಾಗಿ 4 ಬಿ.ಯು ಮತ್ತು 4 ಸಿಯು ಗಳನ್ನು ಬಳಸಿಕೊಳ್ಳಲಾಗಿದ್ದು ಹಾಗೂ 6 ಬಿ.ಯು ಮತ್ತು 6 ಸಿ.ಯುಗಳನ್ನು ಕಾಯ್ದಿರಿಸಲಾಗಿದೆ. ಒಟ್ಟಾರೆಯಾಗಿ 25 ಬಿ.ಯು., 25 ಸಿ.ಯುಗಳನ್ನು ಚುನಾವಣೆಗೆ ಉಪಯೋಗಿಸಿಕೊಳ್ಳಲಾಗುತ್ತಿದೆ.

ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಸೆಂಟರ್ ಮತ್ತು ಮತ ಎಣಿಕೆ ಕೇಂದ್ರ ವಿವರ

ಪಿ.ಬಿ. ರಸ್ತೆಯಲ್ಲಿರುವ ಡಿ.ಆರ್.ಆರ್. ವಿದ್ಯಾಸಂಸ್ಥೆಯನ್ನು ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಎಣಿಕಾ ಕೇಂದ್ರವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸೆಪ್ಟೆಂಬರ್ 22 ರಿಂದ ನೂತನ ನವೀಕೃತ ಕೆಎಸ್‍ಆರ್‍ ಟಿ ಸಿ ಬಸ್ ನಿಲ್ದಾಣದಿಂದ ಬಸ್ ಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ:ನೂತನ ನವೀಕೃತ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಸೆಪ್ಟೆಂಬರ್ 22 ರಿಂದ ಬಸ್ ಕಾರ್ಯಾಚರಣೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡುವರು.

ಸೆ.22 ರಿಂದ ಪ್ರಸ್ತುತ ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಕ.ರಾ.ರ.ಸಾ.ನಿಗಮದ ವತಿಯಿಂದ ನಿರ್ಮಿತವಾಗಿರುವ ಪಿ.ಬಿ.ರಸ್ತೆಯ ಮರುನಿರ್ಮಿತ ಬಸ್ ನಿಲ್ದಾಣ ಮತ್ತು ಬೇತೂರು ರಸ್ತೆಯ ನೂತನ ಮಾರ್ಗಗಳ ಬಸ್ ನಿಲ್ದಾಣದಿಂದ ಸಂಸ್ಥೆಯ ವಾಹನಗಳ ಕಾರ್ಯಾಚರಣೆ ಆರಂಭವಾಗಲಿದೆ. ಸೆ.22 ರಿಂದ ಹೈಸ್ಕೂಲ್ ಬಸ್ ನಿಲ್ದಾಣದಿಂದ ಸಂಸ್ಥೆಯ ಎಲ್ಲಾ ವಾಹನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್ ಹೆಬ್ಬಾರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಕಲಿ ಸೇವಾ ಪ್ರಮಾಣಪತ್ರ : ಅತಿಥಿ ಉಪನ್ಯಾಸಕ ಎಸ್. ಸಿದ್ಧನಗೌಡ ವಿರುದ್ಧ ಎಫ್.ಐ.ಆರ್ ದಾಖಲು

Published

on

ಸುದ್ದಿದಿನ,ಕೂಡ್ಲಿಗಿ:ಪಟ್ಟಣದ ಎಸ್.ಎ.ವಿ.ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಕಲಿ ಸೀಲು ಹಾಗೂ ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು ಅತಿಥಿ ಉಪನ್ಯಾಸಕನಾಗಿ ಕಾರ್ಯನಿರ್ವಹಿಸಿದ್ದ ಎಸ್.ಸಿದ್ಧನಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಾಲ್ಕು ವರ್ಷಗಳ ನಕಲಿ ಸೇವಾ ಪ್ರಮಾಣಪತ್ರ ತಯಾರಿಸಿಕೊಂಡ ಕೂಡ್ಲಿಗಿ ತಾಲ್ಲೂಕಿನ ಸೂಲದಹಳ್ಳಿ ಅಗ್ರಹಾರ ಗ್ರಾಮದ ಎಸ್.ಸಿದ್ಧನಗೌಡ ಎಂಬ ಅತಿಥಿ ಉಪನ್ಯಾಸಕನ ಮೇಲೆ ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರು ಕೂಡ್ಲಿಗಿ ನಗರದ ಪೋಲಿಸ್ ಠಾಣೆಯಲ್ಲಿ ಐ.ಪಿಸಿ ಸೆಕ್ಷನ್ 1860 ಕಲಂ 420, 465, 468, 471 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಎಸ್.ಸಿದ್ಧನಗೌಡ ಅವರು ನಕಲಿ ಸೇವಾ ಪ್ರಮಾಣಪತ್ರ ಸಿದ್ಧಪಡಿಸಿಕೊಂಡು 2023ನೇ ಸಾಲಿನಲ್ಲಿ ನಡೆದ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕನ್ನಡ ಉಪನ್ಯಾಸಕರಾಗಿ ದಾವಣಗೆರೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜನ್ನು ಆಯ್ದುಕೊಂಡು ಸೇವೆಗೆ ವರದಿ‌ ಮಾಡಿಕೊಂಡಿದ್ದರು. ಇವರ ಸೇವೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಕೆ.ಎ.ಓಬಳೇಶ್ ಅವರು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಮಾಹಿತಿ ಪಡೆದು, ಕೂಡ್ಲಿಗಿ ಪಟ್ಟಣದ ಸರ್ಕಾರಿ ಪ್ರಥಮ‌ ದರ್ಜೆ ಕಾಲೇಜಿನ‌ ಪ್ರಾಂಶುಪಾಲರಾದ ಎನ್.ಕಲ್ಲಪ್ಪ ಇವರ ವಿರುದ್ಧ ಲೋಕಾಯುಕ್ತಾಗೆ ದೂರು ನೀಡಿದ್ದರು.

ವಿಚಾರಣೆಯನ್ನು ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಾಲಯವು ಪ್ರಾಂಶುಪಾಲರಿಗೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಕಲಿ ಸೀಲು, ನಕಲಿ‌ ಪ್ರಮಾಣಪತ್ರ ಸಿದ್ಧಪಡಿಸಿಕೊಂಡ ಎಸ್.ಸಿದ್ಧನಗೌಡ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೋಲಿಸರು ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಭಾರತವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ನೈತಿಕ ಕರ್ತವ್ಯವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಆಯೋಜಿಸಿದ್ದ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆಮಂಡಳಿಯ 30ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯು 1ಸಾವಿರದ 700 ವಿಶ್ವವಿದ್ಯಾಲಯಗಳು 45 ಸಾವಿರ ಕಾಲೇಜುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಭಾರತವು ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವತ್ತ ಸಾಗುತ್ತಿದ್ದು, ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಪಾಲರು ಕರೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending