ದಿನದ ಸುದ್ದಿ
ಕೋವಿಡ್-19 ಸೇವೆ | ಪಿಎಸ್ಐ ಶಿವರುದ್ರಪ್ಪ ಎಸ್ ಮೇಟಿ ಅವರಿಗೆ ಪ್ರಶಂಸನೀಯ ಪತ್ರ ನೀಡಿ ಗೌರವಿಸಿದ ಎಸ್ಪಿ ಹನುಮಂತರಾಯ
- ವರದಿ : ಕೋಗಲೂರು ಕುಮಾರ್
ಸುದ್ದಿದಿನ,ಚನ್ನಗಿರಿ : ರಾಷ್ಟವ್ಯಾಪ್ತಿ ಹರಡಿ ಮನುಕುಲದ ಮೇಲೆ ಮರಣ ಮೃದಂಗ ಭಾರಿಸುತ್ತಾ ಈಡೀ ವಿಶ್ವವನ್ನೆ ಆಟದ ಮೈದಾನ ಮಾಡಿಕೊಂಡು ಮನು ಕುಲಕ್ಕೆ ಮಾರಕವಾಗಿರುವ ಮಹಾಮಾರಿ ಕಿಲ್ಲರ್ ಕೊರೋನ ವಿರುದ್ದ ಸಮರ ಸಾರಿ ಪೋಲಿಸ್ ಇಲಾಖೆಯು ಮನುಕುಲದ ಉಳಿವಿಗಾಗಿ ಹಗಲು ರಾತ್ರಿ ಎನ್ನದೆ ಸ್ವಂತ ಕುಟುಂಬವನ್ನು.ಕುಟುಂದವರನ್ನು ದೂರ ಇಟ್ಟು ನಿರಂತರವಾಗಿ ಮಹಾಮಾರಿ ವಿರುದ್ದ ಹೋರಾಟವನ್ನು ನಡೆಸುತ್ತಿರುವ ಪೋಲಿಸರ ಸಾದನೆಯು ಅತ್ಯಂತ ಶ್ಲಾಘನೀಯ.
ಇಂತಹ ದಕ್ಷ ಪೋಲಿಸ್ ಅಧಿಕಾರಿಗಳಲ್ಲಿ ಒಬ್ಬರಾದ ತಾಲೂಕಿನ ಸಂತೇಬೆನ್ನೂರು ಪೋಲಿಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆದ ಶಿವರುದ್ರಪ್ಪ ಎಸ್ ಮೇಟಿ ರವರ ಕರ್ತವ್ಯೆವನ್ನು ಗುರುತಿಸಿ ಮಾನ್ಯ ಜಿಲ್ಲಾ ವರಿಷ್ಠಾದಿಕಾರಿಗಳಾದ ಹನುಮಂತ ರಾಯ ರವರು ಮಹಾಮಾರಿ ಕೊರೋನ ವಿರುದ್ದ ಹೋರಾಡಿದ ಸಾದನೆಯನ್ನು ಮೆಚ್ಚಿ ಇವರಿಗೆ ಪ್ರಶಂಸನೀಯ ಪತ್ರವನ್ನು ನೀಡಿ ಗೌರವಿಸಿದೆ.
ಶಿವರುದ್ರಪ್ಪ ಎಸ್ ಮೇಟಿ ರವರು ತಾಲೂಕಿನಲ್ಲೆ ದೊಡ್ಡ ಹೋಬಳಿಯಾದ ಸಂತೇಬೆನ್ನೂರು ಗ್ರಾಮ. ಈ ವ್ಯಾಪ್ತಿಯಲ್ಲಿ ಬರುವಂತಹ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪಿಎಸ್ಐ ಶಿವರುದ್ರಪ್ಪ ಎಸ್ ಮೇಟಿ ರವರು ಕೊರೋನ ವಿರುದ್ದ ಸಾರ್ವಜನಿಕರಿಗೆ ಯಾವುದೆ ರೀತಿಯಲ್ಲಿ ತೊಂದರೆಯನ್ನು ನೀಡದೆ ಮಹಾಮಾರಿ ಕೊರೋನ ವಿರುದ್ದ ಸಾರ್ವಜನಿಕರಲ್ಲಿ ಪ್ರಜ್ಞೆಯನ್ನು ಮೂಡಿಸಿ ಅತ್ಯಂತ ಅವಿಸ್ಮರಣೀಯ ಕಾರ್ಯಗಳನ್ನು ನೆರವೇರಿಸುತ್ತಾ ಬಂದಿರುವ ಇವರು ಜನಸಾಮಾನ್ಯರಿಗೆ ಅತ್ಯಂತ ಪ್ರೀತಿಧಾಯಕರೆನಿಕೊಂಡಿದ್ದಾರೆ .ಇವರ ಕಾರ್ಯ ಹೀಗೆ ಮುಂದುವರೆದು ಜನಸಾಮನ್ಯರ ಮನಸ್ಸಲಿ ಅಚ್ಚಳಿಯದೆ ಉಳಿಯಲಿ ಎಂದು ಈ ಭಾಗದ ಜನರ ಆಶಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

