ದಿನದ ಸುದ್ದಿ
ದಾವಣಗೆರೆ | ಪೋಲಿಸರಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿ
ಸುದ್ದಿದಿನ,ದಾವಣಗೆರೆ: ಕಂಟೈನ್‍ಮೆಂಟ್ ಝೋನ್‍ನಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಫೇಸ್‍ಶೀಲ್ಡ್, ಟ್ರಿಪಲ್ ಲೇಯರ್ ಮಾಸ್ಕ್, ಗ್ಲೊವ್ಸ್, ಸ್ಯಾನಿಟೈಸರ್ ಇತರೆ ಒದಗಿಸುತ್ತಿದ್ದೇವೆ. ಜಿಲ್ಲಾಡಳಿತ ಸಹ ಪಿಪಿಇ ಕಿಟ್‍ಗಳನ್ನು ನೀಡುತ್ತಿದೆ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಹೇಳಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ,
ವೈಯಕ್ತಿಕವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಹಾಗೂ ಮನೆಗೆ ಬಂದ ಮೇಲೆ ಹೇಗೆ ಪ್ರೊಟೊಕಾಲ್ ನಿರ್ವಹಿಸಬೇಕೆಂದು ಅರಿವು ಮೂಡಿಸಲಾಗಿದೆ. ಹಾಗೂ ಆಯುಷ್ ಇಲಾಖೆಯಿಂದ ಆರ್ಸ್ ಆಲ್ಬಾ ಎಂಬ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನು ಜೊತೆಗೆ ಚ್ಯವನ್‍ಪ್ರಾಶ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿ, ಕೊರೊನಾ ನಿಯಂತ್ರಣ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪಾಲಿಕೆ ಉತ್ತಮ ಸಹಯೋಗದಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದರು. ವರ್ತಕರು ಕೊರೊನಾಗೆ ಕಾರಣವಾದರೆ ಅವರೇ ಹಣ ಭರಿಸಬೇಕಂಬ ಸುದ್ದಿ ಹರಿದಾಡುತ್ತಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿ ಸ್ವಯಂ ಘೊಷಿತ ಮುಚ್ಚಳಿಕೆ ನೀಡುವಂತೆ ತಿಳಿಸಿದ್ದೇವೆ ಹೊರತು ಹಣ ಭರಿಸುವಂತೆ ತಿಳಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243