ದಿನದ ಸುದ್ದಿ
ದಾವಣಗೆರೆ | ತಪೋವನ ಸಂಸ್ಥೆಯಿಂದ ಪೊಲೀಸರಿಗೆ ಆಯುಷ್ ಔಷಧ ಕಿಟ್ ವಿತರಣೆ
ಸುದ್ದಿದಿನ,ದಾವಣಗೆರೆ: ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ಮಂಗಳವಾರ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಆರಕ್ಷಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಔಷಧ ಕಿಟ್‍ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ತಪೋವನ ಸಂಸ್ಥೆಯ ಚೇರ್ಮನ್ ಡಾ.ಶಶಿಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್ ಗೌಡ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243