Connect with us

ದಿನದ ಸುದ್ದಿ

ದಾವಣಗೆರೆ | ಮುಂಗಾರು ವಿಪತ್ತು ನಿರ್ವಹಣೆಗೆ ಸಿದ್ದತೆ, ಸಿಡಿಲಬ್ಬರ ಮುನ್ನೆಚ್ಚರಿಕೆಗೆ ಆಪ್ ಅಳವಡಿಸಿಕೊಳ್ಳಲು ಸಲಹೆ

Published

on

ಸುದ್ದಿದಿನ,ದಾವಣಗೆರೆ:ರಾಷ್ಟ್ರೀಯ ಹಾಗೂ ಪ್ರಾಕೃತಿಕ ವಿಕೋಪಗಳ ಸಂದರ್ಭಗಳಲ್ಲಿ ಜನರ ಆಸ್ತಿ, ಪಾಸ್ತಿ ನಷ್ಟ ತಡೆಗಟ್ಟಲು ಹಾಗೂ ರಕ್ಷಣೆಗೆ ಅನುಕೂಲವಾಗುವಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತುರ್ತು ಸಂದರ್ಭದಲ್ಲಿ ಸಂವಹನಕ್ಕಾಗಿ ಸೈರನ್‍ಗಳನ್ನು ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ತುರ್ತು ಪರಿಸ್ಥಿತಿ ಮತ್ತು ಪ್ರಕೃತಿ ವಿಪತ್ತುಗಳಿಂದ ಉಂಟಾಗುವ ಸಂದರ್ಭವನ್ನು ನಿಭಾಯಿಸಲು ಮತ್ತು ಈ ವೇಳೆ ತುರ್ತಾಗಿ ಜನರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಾಗೂ ಜಾಗೃತರಾಗಿರಲು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಮೂರುಕಡೆ ಸೈರನ್ ಅಳವಡಿಸಬೇಕು. ಈ ಸೈರನ್‍ಗಳನ್ನು ಕನಿಷ್ಠ 50 ಕಿ.ಮೀ ಅಂತರದಲ್ಲಿರುವಂತೆ ನೋಡಿಕೊಳ್ಳಬೇಕೆಂದರು.

ತುರ್ತು ಸಂದರ್ಭದಲ್ಲಿ ಜನರು ಗಾಬರಿಯಾಗಂತೆ ಮತ್ತು ರಕ್ಷಣೆ ಪಡೆಯಲು ಸಲಹೆ ಮತ್ತು ಮುಂಜಾಗ್ರತಾ ಕ್ರಮಗಳ ಸೂಚನೆ ನೀಡಬೇಕು. ವಿಕೋಪದಲ್ಲಿ ಸಿಲುಕಿದಾಗ ರಕ್ಷಣಾತ್ಮಕ ಕ್ರಮಗಳ ಜೊತೆಗೆ ಜೀವಹಾನಿಯನ್ನು ತಡೆಗಟ್ಟಲು ಸನ್ನದ್ದವಾಗಿರಬೇಕು. ಇದಕ್ಕಾಗಿ ಆಸ್ಪತ್ರೆಯಲ್ಲಿನ ತುರ್ತು ನಿಗಾಘಟಕ, ವೈದ್ಯರ ತಂಡ, ರಕ್ಷಣಾತ್ಮಕ ಕ್ರಮಗಳ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳುವ ನಿಟ್ಟಿನಲ್ಲಿ 24/7 ಸಿದ್ದರಾಗಿರುವಂತೆ ತಂಡಗಳನ್ನು ರಚನೆ ಮಾಡಿಕೊಳ್ಳಬೇಕೆಂದು ತಿಳಿಸಿ ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಯೋಜನೆ ತಯಾರಿಸಲು ಸೂಚನೆ ನೀಡಿದರು.

ದಾಮಿನಿ ಆಪ್ ಡೌನ್‍ಲೊಡ್ ಮಾಡಿ

ಪೂರ್ವ ಮುಂಗಾರು ಸಂದರ್ಭದಲ್ಲಿ ಸಿಡಿಲು ಬಡಿದು ಜನರು ಮತ್ತು ಜಾನುವಾರುಗಳು ಅಸುನೀಗುವುದನ್ನು ಕಾಣಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಡಿಲಿನ ಮುನ್ನೆಚ್ಚರಿಕೆ ಮಾಹಿತಿ ತಿಳಿದುಕೊಳ್ಳಲು ಮೊಬೈಲ್‍ನಲ್ಲಿ ಪ್ಲೇಸ್ಟೋರ್‍ನಿಂದ ಕೇಂದ್ರ ಸರ್ಕಾರದ ದಾಮಿನಿ ಆಫ್ ಡೌನ್‍ಲೋಡ್ ಮಾಡಿಕೊಂಡಲ್ಲಿ, ಅದು ಮಳೆ ಬರುವಾಗ ತಮ್ಮ ಸುತ್ತಮುತ್ತಲಿನಲ್ಲಿ ಸಿಡಿಲು ಅಪ್ಪಳಿಸುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಲಿದೆ. ಇದರಿಂದ ಕುರಿಗಾಯಿಗಳು ಜಾನುವಾರುಗಳ ರಕ್ಷಣೆ ಮತ್ತು ಜೀವ ರಕ್ಷಣೆ ಪಡೆದುಕೊಳ್ಳಬಹುದಾಗಿದೆ ಎಂದರು.

ಮುಂಗಾರು ಅನಾಹುತ ತಡೆಗೆ ಸಿದ್ದರಾಗಿ

ಜೂನ್‍ನಿಂದ ಮುಂಗಾರು ಆರಂಭವಾಗಲಿದೆ ಮತ್ತು ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಸಿಥಿಲವಾಗಿರುವ ಶಾಲಾ ಕೊಠಡಿಗಳ ದುರಸ್ಥಿಯನ್ನು ತಕ್ಷಣವೇ ಕೈಗೊಂಡು ರಿಪೇರಿ ಮಾಡಿಸಬೇಕು. ಮತ್ತು ತುಂಬಾ ಸಿಥಿಲವಾಗಿರುವ ಕೊಠಡಿಗಳನ್ನು ಗುರುತಿಸಿ ರಿಪೇರಿಗೆ ಕ್ರಿಯಾಯೋಜನೆ ತಯಾರಿಸಿ ನೀಡಲು ಉಪನಿರ್ದೇಶಕರಿಗೆ ತಿಳಿಸಿ ಎಲ್ಲಾ ಶಾಲೆಗಳ ಸ್ಥಿತಿಗತಿ ಹಾಗೂ ಸುಸ್ಥಿತಿ ಬಗ್ಗೆ ಆಡಿಟ್ ವರದಿ ಪರಿಶೀಲಿಸಿ ನೀಡಲು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದವರಿಗೆ ಸೂಚನೆ ನೀಡಿದರು.

ಕೆರೆ, ಕಟ್ಟೆಗಳ ಪರಿಶೀಲನೆ ನಡೆಸಿ

ಜಿಲ್ಲೆಯಲ್ಲಿನ ಕೆರೆಗಳು ಮತ್ತು ಚೆಕ್‍ಡ್ಯಾಂಗಳ ಸುಸ್ಥಿತಿ ಬಗ್ಗೆ ಮತ್ತು ರಸ್ತೆ, ಕಾಲುವೆಗಳಲ್ಲಿನ ಕಿರು ಸೇತುವೆಗಳ ಪರಿಶೀಲನೆ ನಡೆಸಿ ಆಯಾ ಇಲಾಖೆಯವರು ವರದಿ ನೀಡಬೇಕು. ಮಳೆಗಾಲದಲ್ಲಿ ಸೇತುವೆ ದುಸ್ಥಿಯಾಗಿದ್ದಲ್ಲಿ ನೀರಿನಿಂದ ಇದು ಕಾಣದೆ, ಇದರಲ್ಲಿ ಜಾರಿ ಹೋಗುವ ಸಂಭವವಿರುತ್ತದೆ. ಆದ್ದರಿಂದ ಸೇತುವೆ, ಕೆರೆಯ ಏರಿ ಸುಭದ್ರತೆ ಪರಿಶೀಲನೆ ನಡೆಸಲು ಸೂಚನೆ ನೀಡಿದರು. ಇದೇ ವೇಳೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಅವರು ಕೊಡಗನೂರು ಕೆರೆ ಏರಿಯ ದುರಸ್ಥಿ ಕೆಲಸ ನಡೆಯುತ್ತಿದ್ದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending