ದಿನದ ಸುದ್ದಿ

ದಾವಣಗೆರೆ | ಪಡಿತರ ಅಕ್ಕಿ ಜಪ್ತಿ : ಏ. 19 ರಂದು ಬಹಿರಂಗ ಹರಾಜು

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಅನೌಪಚಾರಿಕ ಪಡಿತರ ಪ್ರದೇಶದಲ್ಲಿ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟುಕೊಳ್ಳಲಾಗಿದ್ದ ಪಡಿತರ ಅಕ್ಕಿ ಹಾಗೂ ರಾಗಿಯನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಪತ್ತೆ ಮಾಡಿ, ಜಪ್ತಿ ಮಾಡಿಕೊಳ್ಳಲಾದ ಧಾನ್ಯವನ್ನು ಏ.19 ರಂದು ದಾವಣಗೆರೆಯ ಎಪಿಎಂಸಿ ಆವರಣದಲ್ಲಿನ ಕೆಎಸ್‍ಸಿಎಫ್‍ಸಿ ಸಗಟು ಮಳಿಗೆ 1 ಹಾಗೂ 2 ರಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version