ದಿನದ ಸುದ್ದಿ

ದಾವಣಗೆರೆ | ವಾಹನ ಬಳಕೆದಾರರಲ್ಲಿ ರಸ್ತೆ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ನಗರದ ಗುಂಡಿ ಮಾದೇವಪ್ಪ ವೃತ್ತದಲ್ಲಿ ದಾವಣಗೆರೆ ಮಹಾನಗರ ವ್ಯಾಪ್ತಿಯ ವಾಹನ ಬಳಕೆದಾರರಲ್ಲಿ ಹಾಗೂ ರಸ್ತೆ ಬಳಕೆದಾರರಲ್ಲಿ ರಸ್ತೆ ಸುರಕ್ಷತೆ ಕುರಿತು ಎಲ್‍ಇಡಿ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿ.ಎಸ್ ಪ್ರಮುತೇಶ್ ಅವರು 5 ಎಲ್.ಇ.ಡಿ ವಾಹನಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ದಾವಣಗೆರೆ ಸಂಚಾರ ವೃತ್ತ ನಿರೀಕ್ಷಕ ನಲವಾಗಲು ಮಂಜುನಾಥ್, ದಕ್ಷಿಣ ಸಂಚಾರ ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಶೈಲಜಾ ಕೆ.ಎನ್, ನಿರ್ಮಲ ಡಿ.ಎಚ್, ಉತ್ತರ ಸಂಚಾರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜಪ್ಪ ಟಿ, ಜಯಶೀಲ, ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ಎಸ್.ಟಿ ಸತೀಶ್, ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ ಮಾಲೀಕರ ಸಂಘದ ಜಿಲ್ಲಾಧ್ಯಕ್ಷರಾದ ಅಣ್ಣಪ್ಪ ಸ್ವಾಮಿ ಎಚ್ , ಖಜಾಂಚಿ ರಾಘವೇಂದ್ರ ಎಚ್.ಆರ್, ಮೋತಿವೀರಪ್ಪ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version