ದಿನದ ಸುದ್ದಿ
ದಾವಣಗೆರೆ | ಜೋಗ ಜಲಪಾತ ವೀಕ್ಷಣೆಗೆ ವಿಶೇಷ ಸಾರಿಗೆ ಬಸ್
ಸುದ್ದಿದಿನ,ದಾವಣಗೆರೆ : ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 01 ರಿಂದ ವಾರದ ಎಲ್ಲಾ ದಿನಗಳಂದು ಇರುತ್ತದೆ.
ಭಾನುವರದಂದು ಮಾತ್ರ ಈ ಸೇವೆ ಪ್ರಾರಂಭಿಸಲಾಗಿತ್ತು. ಆಧರೆ ಈ ಪ್ಯಾಕೇಜ್ ಪ್ರಯಾಣಕ್ಕೆ ಸಾರ್ವಜನಿಕ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಬಂದ ಕಾರಣ ಆ.01 ರಿಂದ ವಾರದ ಎಲ್ಲಾ ದಿನಗಳಂದು ಬಸ್ ಕಾರ್ಯಚರಣೆ ನಡೆಸಲು ಉದ್ದೇಶಿಸಲಾಗಿದೆ.
ದಾವಣಗೆರೆಯಿಂದ ಬೆಳಿಗ್ಗೆ 07 ಕ್ಕೆ ಹೊರಟು, ಹರಿಹರ 7-30, ಶಿರಸಿ- ಬೆ. 10.30 ಕ್ಕೆ ತಲುಪುತ್ತದೆ. 12 ಕ್ಕೆ ಶಿರಸಿಯಿಂದ ಹೊರಟು ಮಧ್ಯಾಹ್ನ 1.30 ಕ್ಕೆ ಜೋಗವನ್ನು ತಲುಪುತ್ತದೆ. ಸಂಜೆ 4.30 ಕ್ಕೆ ಜೋಗದಿಂದ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಯನ್ನು ತಲುಪುತ್ತದೆ. ಪ್ರಯಾಣ ದರ ರೂ 500 (ಹೋಗಿ ಬರುವ 2 ಬದಿ ಸೇರಿ) ಮಕ್ಕಳಿಗೆ ರೂ.375 (2 ಬದಿಯಿಂದ) ಹರಿಹರದಿಂದ ಹೊರಡುವ ಪ್ರಯಾಣಿಕರಿಗೆ ದರ ರೂ. 475 (2 ಬದಿ) ಮಕ್ಕಳಿಗೆ ರೂ 350 ಆಗಿರುತ್ತದೆ.
ಮುಂಗಡ ಬುಕ್ಕಿಂಗ್ ಕೌಂಟರ್‍ಗಳಲ್ಲಿ ಬುಕ್ಕಿಂಗ್ www.ksrtc.in ಮಾಡಲು ಸೌಕರ್ಯ ಕಲ್ಪಿಸಲಾಗಿದೆ ಎಂದು ದಾವಣಗೆರೆ ಕ.ರಾ.ರ.ಸಾ. ನಿಗಮ. ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243