ದಿನದ ಸುದ್ದಿ

ಡಿ.29 ರಿಂದ ರಾಜ್ಯ ಸರ್ಕಾರಿ ನೌಕರರ ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

Published

on

ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ದಾವಣಗೆರೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ 29ರಿಂದ ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಆನ್‌ಲೈನ್ ಮೂಲಕ ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ 3 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆ ಇದೆ. 158 ಕ್ಕೂ ಹೆಚ್ಚು ವೈಯಕ್ತಿಕ ಹಾಗೂ 18 ಗುಂಪು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸುವ ಅಧಿಕಾರಿ, ನೌಕರರಿಗೆ ಎರಡು ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version