ಕ್ರೀಡೆ

ಅಂತರ ವಿಶ್ವವಿದ್ಯಾಲಯದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ : ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.

ಡಿ.23 ರಿಂದ 26 ರವರೆಗೆ ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟ, ಶಿವಮೊಗ್ಗ ಇಲ್ಲಿ ನಡೆಯುವ ಪುರುಷರ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯದ ಖೋ-ಖೋ ಪಂದ್ಯಾವಳಿಯಲ್ಲಿ ಸ್ಪರ್ಧಿಸಲು ಆಯ್ಕೆಯಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ
ಖೋ-ಖೋ ಕ್ರೀಡಾಪಟುಗಳಾದ ಬಾಷಿತ್ ಆಲಿ, ಅರುಣ ಜಿ.ಬಿ., ಭರತ್ ಕುಮಾರ್ ಪಿ.ಬಿ., ಬಾಹುಬಲಿ.ಎಸ್.ಬೀಳಗಿ, ಹನುಮಂತ. ಆರ್, ರಂಗಸ್ವಾಮಿ ಸಿ.ಎಂ., ವೀರೇಶ್, ಅರ್ಜುನ ಇವರುಗಳು ಆಯ್ಕೆಯಾಗಿದ್ದಾರೆ.

ಖೋ-ಖೋ ಪಂದ್ಯಾವಳಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ತಂಡವು ವಿಜಯ ಸಾಧಿಸಲೆಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ ಮತ್ತು ಇಲಾಖೆಯ ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version