ದಿನದ ಸುದ್ದಿ

ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

2012-13 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಇರುವ ಪರಿಶಿಷ್ಟ ಜಾತಿ 9, ಪರಿಶಿಷ್ಟ ಪಂಗಡ 4 ಮತ್ತು 2013-14 ರಿಂದ 2016-17 ನೇ ಸಾಲಿನವರೆಗೆ ಬಾಕಿ ಇರುವ ಹಿಂದುಳಿದ ವರ್ಗದ 10 ಹಾಗೂ ಅಲ್ಪಸಂಖ್ಯಾತರ ವರ್ಗದ 03 ಸೇರಿದಂತೆ ಒಟ್ಟು 26 ಅರ್ಹ ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆ ತಲಾ ರೂ.2 ಲಕ್ಷಗಳಲ್ಲಿ ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ ಒದಗಿಸಲು ಅರ್ಹ ಫಲಾನುಭವಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆಕ್ಷೇಪಣೆಗಳೇನಾದರೂ ಇದಲ್ಲಿ ಸೂಕ್ತ ದಾಖಲೆಗೊಂದಿಗೆ ಫೆ.5 ರೊಳಗೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ, ದಾವಣಗೆರೆ ಅಥವಾ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಪವಿಭಾಗಾಧಿಕಾರಿಗಳ ಕಚೇರಿ ಆವರಣ, ರೈಲ್ವೆ ನಿಲ್ದಾಣದ ಪಕ್ಕ, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿಗೆ ಆಕ್ಷೇಪಣೆ ಸಲ್ಲಿಸಬಹುದೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version