Connect with us

ದಿನದ ಸುದ್ದಿ

ದಾವಣಗೆರೆ | ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೈಯದ್ ಖಾಲಿದ್ ಅಹ್ಮದ್ ಆಯ್ಕೆ

Published

on

ಸುದ್ದಿದಿನ, ದಾವಣಗೆರೆ : ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದಾವಣಗೆರೆಯ ಉತ್ಸಾಹಿ ಯುವ ಮುಖಂಡರಾದ ಸೈಯದ್ ಖಾಲಿದ್ ಅಹ್ಮದ್ ಆಯ್ಕೆಯಾಗಿದ್ದಾರೆ.

ದಾವಣಗೆರೆ ಜಿಲ್ಲಾ ಅಧ್ಯಕ್ಷರಾಗಿ ನಂತರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ತಮ್ಮ ಅತಿ ಹೆಚ್ಚು ಸಮಯ ಪಕ್ಷಕ್ಕಾಗಿ ಮಿಸಲಿಟ್ಟು,ಪಕ್ಷಕ್ಕಾಗಿ ಹಗಲು ರಾತ್ರಿ ಕಷ್ಟ ಪಟ್ಟು ದುಡಿದಿದ್ದಾರೆ ಅದರ ಫಲವಾಗಿ ಮಾನ್ಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ ರವರು ಅವರ ಕಾರ್ಯವನ್ನು ಗುರುತಿಸಿ ಇಂದು ಅತ್ಯನ್ನತ ಹುದ್ದೆಯನ್ನು ಘೋಷಿಸಿದ್ದಾರೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಸಂತಸ ವ್ಯಕ್ತಪಡಿಸಿದ್ದಾರೆ.

ಸೈಯದ್ ಖಾಲಿದ್ ಅಹ್ಮದ್ ಅವರಿಗೆ ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ನವರು ಹಾಗೂ ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರು ಅಭಿನಂದಿಸಿದ್ದಾರೆ.ದಾವಣಗೆರೆ ಹೆಸರನ್ನು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿ ನಿವು ರಾಜಕೀಯದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ, ತಿಳಿಸಿದರು.

ರಾಜ್ಯ ಸರ್ಕಾರ, ಪಂಚ ಖಾತ್ರಿ ಯೋಜನೆಗಳ ಅನುಷ್ಠಾನಕ್ಕಾಗಿ, ಸಮಿತಿ ರಚಿಸಿ, ರಾಜ್ಯದ ತೆರಿಗೆದಾರರ ಹಣವನ್ನು, ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ, ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣಾ ಸಮಿತಿ ರದ್ದು ಪಡಿಸುವಂತೆ, ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ದೂರು ನೀಡಿದರು.

ಖಾತ್ರಿ ಯೋಜನೆಗಳ ಅನುಷ್ಟಾನಕ್ಕೆ ರಚಿಸಲಾಗಿರುವ, ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರದ್ದು ಪಡಿಸಿ, ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ, ಪ್ರತಿಪಕ್ಷ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದ್ದರಿAದ, ಸದನ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿತ್ತು.

ಇಂಧನ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ವಾಹನ ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ಉಂಟಾದ, ಆರ್ಥಿಕ ಹೊರೆ ತಗ್ಗಿಸಲು, ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು, ಶೇಕಡ 15ರಷ್ಟು ಹೆಚ್ಚಿಸಲಾಗಿದೆ ಎಂದು, ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಶಾಸಕ ಕೇಶವಪ್ರಸಾದ್ ಅವರ ಪ್ರಶ್ನೆಗೆ ಸಚಿವರು, ಉತ್ತರಿಸಿದರು.

ರಾಜ್ಯ ಸಾರಿಗೆ ಸಂಸ್ಥೆ ಅಧೀನದ, ನಾಲ್ಕು ಸಾರಿಗೆ ನಿಗಮಗಳು, 5ಸಾವಿರದ 200 ಕೋಟಿ ರೂಪಾಯಿ ನಷ್ಟದಲ್ಲಿವೆ. ನಿಗಮಗಳ ಪುನಃಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು, ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ, ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ.

ತರಬೇತಿ ಏಪ್ರಿಲ್ 17 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿ ವಸತಿಯುತವಾಗಿದ್ದು, ಉಚಿತ ಊಟ, ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585 ಗೆ ಸಂಪರ್ಕಿಸಬಹುದು ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

Published

on

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ ಮುಂದೂಡಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending