ದಿನದ ಸುದ್ದಿ
ದಾವಣಗೆರೆ | ಅಗತ್ಯ ಸೇವೆಗಳಿಗಾಗಿ ಸಹಾಯವಾಣಿ : ಕೂಡಲೇ ಸಂರ್ಪಕಿಸಿ
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಯಲ್ಲಿದೆ. ಲಾಕ್‍ಡೌನ್ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಬಡವರಿಗೆ ದಿನನಿತ್ಯದ ಆಹಾರ ಸಾಮಗ್ರಿಗಳು, ಔಷಧಿ ಮತ್ತಿತರೇ ಅಗತ್ಯ ಸೇವೆ/ವಸ್ತುಗಳು ಅವಶ್ಯವಿದ್ದಲ್ಲಿ ಸಾರ್ವಜನಿಕರು ಅಗತ್ಯ ಸೇವೆಗಳಿಗಾಗಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 1077 (ಟಾಲ್‍ಫ್ರೀ) ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243