Connect with us

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವವು 2020 ಜನವರಿಯಲ್ಲಿ ನಡೆಯಲ್ಲಿದ್ದು, ವಿದ್ಯಾರ್ಥಿಗಳು 7ನೇ ಘಟಿಕೋತ್ಸವದ ಪ್ರಮಾಣ ಪತ್ರಕ್ಕಾಗಿ ಅರ್ಜಿಯನ್ನು ಸಲ್ಲಿಸಲು ಕೋರಿದೆ.

2018 ನವೆಂಬರ್/ಡಿಸೆಂಬರ್ ಹಾಗೂ ಮೇ/ಜೂನ್ ರಲ್ಲಿ ನಡೆದ ವಿವಿಧ ಸ್ನಾತಕ/ಸ್ನಾತಕೋತ್ತರ/ಪಿಹೆಚ್‍ಡಿ/ ಎಂ.ಫಿಲ್, ಪದವಿಗಳ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಿಂದಿನ ವರ್ಷಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರದ ಅರ್ಜಿಗಳನ್ನು ಆನ್‍ಲೈನ್ ತಂತ್ರಜಾಲ www.davangereuniversity.ac.in ನಲ್ಲಿ Examination ಮೆನುವಿಗೆ ಹೋಗಿ DU Portal ನಲ್ಲಿ Convocation ಮೂಲಕ ಅರ್ಜಿಯನ್ನು Upload ಮಾಡಬೇಕು. ಅರ್ಜಿ ಸಲ್ಲಿಸಲು ಡಿ.28 ಕಡೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 6363341215, 6363337901 ಹಾಗೂ 6363351762 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಪಿ.ಹೆಚ್.ಡಿ/ಎಂ.ಫಿಲ್ ಪದವೀಧರರು ಅರ್ಜಿಯನ್ನು ನೇರವಾಗಿ ಆನ್‍ಲೈನ್‍ನಲ್ಲಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in ನಲ್ಲಿ ನೀಡಲಾಗಿರುವ ನೋಂದಣಿ ಸಂಖ್ಯೆಗಳನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜೈವಿಕ ಗೊಬ್ಬರಗಳ ಮಾರಾಟ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಜೈವಿಕ ಕೇಂದ್ರದಲ್ಲಿ, ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೂಡೊಮೋನಾಸ್ ಹಾಗೂ ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ ಅಜಟೋಬ್ಯಾಕ್ಟರ್ ಜೈವಿಕ ಗೊಬ್ಬರ ಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಇವುಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ, ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆಸಕ್ತ ರೈತರು ಉತ್ತಮ ಗುಣಮಟ್ಟದ ಜೈವಿಕ ನಿಯಂತ್ರಕ ಹಾಗೂ ಜೈವಿಕ ಗೊಬ್ಬರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9611556835 ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರು : ಐಷಾರಾಮಿ ಹೋಟೆಲ್‌ಗಳಿಗೆ ಬಾಂಬ್ ಬ್ಲಾಸ್ಟ್ ಬೆದರಿಕೆ

Published

on

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಮೂರು ಐಷಾರಾಮಿ ಹೊಟೇಲ್‌ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ.

ಇಂದು ಬೆಳಗ್ಗೆ ಹೊಟೇಲ್ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬೆಳಕಿಗೆ ಬಂದಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೊಟೇಲ್‌ಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ತೆರಳಿ, ಪರಿಶೀಲನೆ ನಡೆಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

HELPLINE | ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣ ; ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ

Published

on

ಸುದ್ದಿದಿನ ಡೆಸ್ಕ್ : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ.

ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್‌ಐಟಿ ಸಂಪರ್ಕಿಸಿ ದೂರು ನೀಡಬಹುದು. ಅವರು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ತಂಡ ಸಿದ್ಧವಿದೆ. ಗುರುತು ಹಾಗೂ ಮಾಹಿತಿ ವಿಷಯದಲ್ಲಿ ಗೌಪ್ಯತೆ ಕಾಪಾಡಲಾಗುತ್ತದೆ. ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಸಹಾಯವಾಣಿ: 6360938947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending