ದಿನದ ಸುದ್ದಿ
ದಾವಣಗೆರೆ ವಿವಿ ಯಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಆರಂಭ : ಅರ್ಜಿ ಆಹ್ವಾನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/10/fashion-design_suddidina.jpg&description=ದಾವಣಗೆರೆ ವಿವಿ ಯಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಆರಂಭ : ಅರ್ಜಿ ಆಹ್ವಾನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/10/fashion-design_suddidina.jpg&description=ದಾವಣಗೆರೆ ವಿವಿ ಯಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಆರಂಭ : ಅರ್ಜಿ ಆಹ್ವಾನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಸ್ಥಳೀಯ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹಾಗೂ ಈ ಫ್ಯಾಷನ್ ಡಿಸೈನಿಂಗ್ ಕ್ಷೇತ್ರಕ್ಕೆ ವೃತ್ತಿ ಕೌಶಲ್ಯಗಳನ್ನು ಒಳಗೊಂಡ ಪದವೀಧರ ಅಭ್ಯರ್ಥಿಗಳನ್ನು ಸೃಷ್ಟಿಸುವ ಸದುದ್ದೇಶದಿಂದ ದಾವಣಗೆರೆ ವಿಶ್ವವಿದ್ಯಾನಿಲಯವು ಹೊಸ ಕೋರ್ಸ್ನ್ನು ಪ್ರಸಕ್ತ ಶೈಕ್ಷಣಿಕ ವರ್ಷ 2020-21 ರಿಂದ ಆರಂಭಿಸಲಾಗುತ್ತಿದ್ದು, ಅ.22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಸ್ನಾತಕೋತ್ತರ ಎಂ.ಎಸ್ಸಿ ಫ್ಯಾಷನ್ ವಿನ್ಯಾಸ ಅಧ್ಯಯನ ವಿಭಾಗವು ಎರಡು ವರ್ಷದ (ನಾಲ್ಕು ಸೆಮಿಸ್ಟರ್) ಕೋರ್ಸ್ ಆಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಪ್ರವೇಶ ಪಡೆಯಬಹುದು. ಕೋರ್ಸ್ನ ಪ್ರವೇಶಾತಿಗಾಗಿ ಈಗಾಗಲೇ ವಿಶ್ವವಿದ್ಯಾನಿಲಯವು ಅಧಿಸೂಚನೆ ಹೊರಡಿಸಿದೆ.
ಕೋರ್ಸ್ನ ಉದ್ದೇಶ
ಫ್ಯಾಷನ್ ವಿನ್ಯಾಸದಲ್ಲಿ ವಿದ್ಯಾರ್ಥಿಗಳಿಗೆ ಸೃಜನಶಿಲತೆ ಮತ್ತು ಹೊಸತನವನ್ನು ಕಂಡುಕೊಳ್ಳುವುದು ಮತ್ತು ಫ್ಯಾಷನ್ ವಿನ್ಯಾಸದ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ತಾಂತ್ರಿಕ ಅಂಶಗಳ ಬಗ್ಗೆ ಜ್ಞಾನವನ್ನು ನೀಡುವುದು ಈ ಕೋರ್ಸ್ನ ಮುಖ್ಯ ಉದ್ದೇಶವಾಗಿದೆ.
ಅರ್ಹತೆ
ಈ ಕೋರ್ಸ್ ವ್ಯಾಸಂಗ ಮಾಡಲಿಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯನ್ನು (ಬಿಎ, ಬಿಎಸ್ಸಿ, ಬಿಕಾಂ, ಬಿಬಿಎಂ, ಬಿಬಿಎ, ಬಿಇ ಇನ್ನಿತರೆ) ಹೊಂದಿರಬೇಕು.
ಕೋರ್ಸ್ನ ಮಹತ್ವ/ಉಪಯೋಗ
ಮಾರುಕಟ್ಟೆ ಆಧಾರಿತ ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ವಿನ್ಯಾಸಕಾರರ ಬೇಡಿಕೆ ಹೆಚ್ಚುತ್ತಿದೆ. ಮುಖ್ಯವಾಗಿ ಜನರು ಹೆಚ್ಚು- ಹೆಚ್ಚು ಫ್ಯಾಷನ್ ಪ್ರಜ್ಞೆಯನ್ನು ಪಡೆಯುತ್ತಿದ್ದಾರೆ. ಹೀಗಾಗಿ ಫ್ಯಾಷನ್ ವಿನ್ಯಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರೆ ಅನುಕೂಲವಿದೆ. ಫ್ಯಾಷನ್ ವಿನ್ಯಾಸ ಪದವೀಧರರನ್ನು ಪ್ರಸಿದ್ಧ ವಿನ್ಯಾಸಕಾರರು ಮಾತ್ರವಲ್ಲದೇ ಸ್ಥಳೀಯ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲೂ ಬೇಡಿಕೆ ಇದೆ. ಅವರ ನೇಮಕಕ್ಕೆ ಆದ್ಯತೆ ನೀಡುತ್ತಿವೆ.
ಉದ್ಯೋಗಾವಕಾಶಗಳು
ಫ್ಯಾಷನ್ ಉದ್ಯಮಕ್ಕೆ ಸೇರಬಯಸುವ ಆಕಾಂಕ್ಷಿಗಳಿಗೆ ಮುಂದೆ ಸಾಕಷ್ಟು ಅವಕಾಶಗಳಿವೆ. ಕೋರ್ಸ್ ಮುಗಿದ ನಂತರ ಫ್ಯಾಷನ್ ವಿನ್ಯಾಸಕಾರರಾಗಿ ಹಾಗೂ ಕಾರ್ಪೋರೇಟ್ ಕಂಪನಿಗಳೊಂದಿಗೆ ಕೆಲಸ ಮಾಡಬಹುದು.
ಕ್ಯಾಂಪಸ್ ಆವರಣದಲ್ಲಿ ಅರ್ಜಿ ಮತ್ತು ಕೈಪಿಡಿ ದೊರೆಯುವುದು. ಅರ್ಜಿ ಸಲ್ಲಿಸಲು ಅ.22 ಕೊನೆಯ ದಿನವಾಗಿರುತ್ತದೆ. ಅ.27, 28 ನತ್ತಯ ಪ್ರವೇಶ ಪರೀಕ್ಷೆ (ತಾತ್ಕಾಲಿಕ) ನಡೆಯಲಿದ್ದು, ಕೌನ್ಸಲಿಂಗ್ ಪ್ರಕ್ರಿಯೆ ನ.02 ಮತ್ತು ನ.03 ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ(ಮೆರಿಟ್ ಸೀಟುಗಳು: ಜನರಲ್ ಮೆರಿಟ್ (ತಾತ್ಕಾಲಿಕ), ನ.04 ಬೆಳಗ್ಗೆ 10.30 ಗಂಟೆಗೆ (ತಾತ್ಕಾಲಿಕ) ಓಪನ್ ಮೆರಿಟ್ ಪ್ರವೇಶಾತಿ ನಡೆಯಲಿದ್ದು ನ.05 ಖಾಲಿ ಉಳಿದ ಸೀಟುಗಳ ಮಾಹಿತಿ ಲಭ್ಯವಾಗುತ್ತದೆ.
ಈ ಕೋರ್ಸ್ ಸೇರಲಿಚ್ಚಿಸುವ ಅಭ್ಯರ್ಥಿಗಳು ಅರ್ಜಿ ಹಾಗೂ ಇನ್ನಿತರೇ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್https://davangereuniversity.ac.in ನೀಡಬಹುದಾಗಿದ್ದು ಸಂಯೋಜನಾಧಿಕಾರಿಗಳ ಮೊ.ನಂ.7892631239 ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

