ದಿನದ ಸುದ್ದಿ
ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ನಾಮಫಲಕ ಅನಾವರಣ
ಸುದ್ದಿದಿನ,ದಾವಣಗೆರೆ:ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಾರ್ಡ್ ನಂ 15 ರಲ್ಲಿ ನಿರ್ಮಾಣಗೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ನಾಮ ಫಲಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಹಾಗೂ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್, ಮಹಾನಗರ ಪಾಲಿಕೆ ಮಹಾಪೌರಾರದ ಎಸ್.ಟಿ. ವೀರೇಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ದೂಡಾ ಆಯುಕ್ತ ಕುಮಾರಸ್ವಾಮಿ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಸೇರಿದಂತೆ ಇತರೆ ಅಧಿಕಾರಿಗಳು, ಪಾಲಿಕೆ ಸದಸ್ಯರುಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243