ದಿನದ ಸುದ್ದಿ
ದಾವಣಗೆರೆ |ಆಮ್ಲಜನಕ ಪೂರೈಕೆ ಕಾರ್ಖಾನೆಗೆ ಉಸ್ತುವಾರಿ ಸಚಿವರ ಭೇಟಿ
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಮೇ 7 ರಂದು ವೈದ್ಯಕೀಯ ಆಮ್ಲಜನಕ ಪೂರೈಸುವ ಹರಿಹರ ತಾಲ್ಲೂಕಿನ ಸದರನ್ ಗ್ಯಾಸ್ ಕಾರ್ಖಾನೆಗೆ ಭೇಟಿ, ಜಿಲ್ಲೆಯ ಆಸ್ಪತ್ರೆಗಳಿಗೆ ಸರಿಯಾದ ಸಮಯಕ್ಕೆ ವೈದ್ಯಕೀಯ ಆಮ್ಲಜನಕವನ್ನು ಸರಬರಾಜು ಮಾಡಬೇಕೆಂದು ಸೂಚನೆ ನೀಡಿದರು.
ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೊರೊನಾ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗಬಾರದು. ಹಾಗೇನಾದರೂ ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಇದನ್ನೂ ಓದಿ | ಭಾರತ | ಶುಕ್ರವಾರ 4.14 ಲಕ್ಷ ಹೊಸ ಕೊರೋನಾ ಪ್ರಕರಣಗಳು ದಾಖಲು
ಈ ವೇಳೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಡಾ.ವಿಜಯ ಮಹಾಂತೇಶ ದಾನಮ್ಮನವರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243