Connect with us

ದಿನದ ಸುದ್ದಿ

ದಾವಣಗೆರೆ ವಿವಿ : ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜೂ. 07 ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರವು ಜೂ. 7 ರವರೆಗೆ ಲಾಕ್‍ಡೌನ್ ಜಾರಿಗೊಳಿಸಿರುವುದರಿಂದ ಕುಲಪತಿಗಳ ಅನುಮೋದನೆ ಮೇರೆಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ | ಜೂ.2 ರಿಂದ ವಿಕಲಚೇತನರಿಗೆ ಲಸಿಕೆ ಆಂದೋಲನ 

ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿಗಳನ್ನು ಡೌನ್‍ಲೌಡ್ ಮಾಡಿಕೊಳ್ಳಲು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in
ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

Published

on

ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending