ದಿನದ ಸುದ್ದಿ
ದಾವಣಗೆರೆ ವಿವಿ : ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜೂ. 07 ರವರೆಗೆ ವಿಸ್ತರಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರವು ಜೂ. 7 ರವರೆಗೆ ಲಾಕ್‍ಡೌನ್ ಜಾರಿಗೊಳಿಸಿರುವುದರಿಂದ ಕುಲಪತಿಗಳ ಅನುಮೋದನೆ ಮೇರೆಗೆ ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ | ಜೂ.2 ರಿಂದ ವಿಕಲಚೇತನರಿಗೆ ಲಸಿಕೆ ಆಂದೋಲನ
ಪಿ.ಹೆಚ್.ಡಿ, ಪಿ.ಡಿ.ಎಫ್, ಡಿ.ಎಸ್‍ಸಿ,ಡಿ.ಲಿಟ್, ಸಂಶೋಧನಾ ಸ್ಥಾನಗಳಿಗೆ ಅರ್ಜಿಗಳನ್ನು ಡೌನ್‍ಲೌಡ್ ಮಾಡಿಕೊಳ್ಳಲು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.davangereuniversity.ac.in
ಸಂಪರ್ಕಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243