Connect with us

ದಿನದ ಸುದ್ದಿ

ದಾವಣಗೆರೆ | ಮಹಿಳೆಯರು ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಕಡೆ ಗಮನ ಕೊಡಬೇಕು : ನ್ಯಾ.ಗೀತಾ.ಕೆ.ಬಿ

Published

on

ಸುದ್ದಿದಿನ,ದಾವಣಗೆರೆ : ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ವಿಶೇಷವಾದ ಸ್ಥಾನಮಾನಗಳಿಗೆ ಪಾತ್ರರಾಗಿದ್ದರೂ ಒದಗಿ ಬರುವ ಸಂಕೋಲೆಗಳನ್ನು ಬದಿಗೊತ್ತಿ ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಗೀತಾ.ಕೆ.ಬಿ ತಿಳಿಸಿದರು.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ತಾಂತ್ರಿಕ ಮತ್ತು ಕಾಲೇಜು ಶಿಕ್ಷಣ ಇಲಾಖೆ, ಮಹಿಳಾ ದೌರ್ಜನ್ಯ ನಿವಾರಣೆ ಹಾಗು ಅಭಿವೃದ್ಧಿ ಕೋಶ ಮತ್ತು ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರ ದಿನಾಚರಣೆಯನ್ನು ಕಳೆದ ಒಂದು ಶತಕದಿಂದಲೂ ಆಚರಿಸಲಾಗುತ್ತಿದ್ದು, 1911 ರಲ್ಲಿ ಡೆನ್ಮಾರ್ಕ್, ಆಸ್ಟ್ರಿಯ, ಜರ್ಮನ್, ಸ್ವಿಡ್ಜರ್‍ಲ್ಯಾಂಡ್ ದೇಶಗಳಲ್ಲಿ ದಶಲಕ್ಷಗಟ್ಟಲೇ ಜನರು ಒಂದೆಡೆ ಸೇರುವ ಮೂಲಕ ಮಹಿಳಾ ದಿನಾಚರಣೆಯನ್ನು ಆರಂಭಿಸಿದರು. ಅಂತರಾಷ್ಟ್ರೀಯ ಮಹಿಳೆಯರ ದಿನವನ್ನು ಮೊದಲ ಬಾರಿಗೆ ಕೂಲಿ ಚಳುವಳಿಯ ಮೂಲಕ ಉತ್ತರ ಅಮೆರಿಕ ಮತ್ತು ಯೂರೋಪ್ ದೇಶಗಳಲ್ಲಿ ಆಚರಿಸಲಾಯಿತು.

ಕೆಲವೇ ರಾಷ್ಟ್ರಗಳಿಗೆ ಸೀಮಿತವಾಗಿದ್ದ ಈ ದಿನಕ್ಕೆ ಸಂಯುಕ್ತ ರಾಷ್ಟ್ರಗಳು ಒಗ್ಗೂಡಿ 1977 ರಲ್ಲಿ ವಿಶ್ವಸಂಸ್ಥೆ ಮೂಲಕ ಅಧಿಕೃತ ಅನುಮೋದನೆ ನೀಡಿ ಮಾರ್ಚ್ 8 ಅನ್ನು ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸುವಂತೆ ಘೋಷಿಸಿತು.

ಇದನ್ನೂ ಓದಿ | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ : ಯುವತಿ ಪತ್ತೆ..!?

ಅಂದಿನ ದಿನಗಳಲ್ಲಿ ಮಹಿಳೆಯರಿಂದ ಪುರುಷರಿಗಿಂತ ಹೆಚ್ಚಾಗಿ ದುಡಿಸಿಕೊಂಡು ಕಡಿಮೆ ವೇತನ ನೀಡಿ, ಕೀಳಾಗಿ ಕಾಣಲಾಗುತ್ತಿತ್ತು. ಶೋಷಣೆ ಮಾಡುತ್ತಿದ್ದರು. ಇದರಿಂದ ಬೇಸತ್ತ ಮಹಿಳೆಯರು ಪ್ರಪಂಚದಲ್ಲಿ ಮಹಿಳೆಯರ ಅಸ್ತಿತ್ವ ಉಳಿಯಬೇಕಾದರೆ ಸಂಘಟಿತರಾಗಬೇಕು. ಸ್ತ್ರೀ ಅಬಲೆ ಅಲ್ಲ ಸಬಲೆ. ಹೆಣ್ಣಿನ ಅಸ್ತಿತ್ವವನ್ನು ಮಹಿಳೆಯರೇ ಉಳಿಸಬೇಕು ಎಂದು ಮಹಿಳೆಯರ ಮತದಾನಕ್ಕೆ, ಸಮಾನ ಕೆಲಸಕ್ಕೆ, ಸಮಾನ ವೇತನಕ್ಕಾಗಿ ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಸಿದರು.

ವೇದ ಕಾಲದಲ್ಲಿರದ ಲಿಂಗ ತಾರತಮ್ಯವು ನಂತರದ ಪುರುಷ ಪ್ರಧಾನ ಸಮಾಜದಲ್ಲಿ ತನ್ನ ಅಸ್ತಿತ್ವ ಪಡೆದು ಮಹಿಳೆಯರನ್ನು ಹತ್ತಿಕ್ಕಲು ಆರಂಭಿಸಿತು. ಪುರುಷ ಪ್ರಧಾನ ಸಮಾಜವು ಸ್ತ್ರೀ ಸಮಾನತೆಯನ್ನು ಕಸಿದುಕೊಂಡು ಅತೀ ಹೆಚ್ಚು ಶೋಷಣೆಗೆ ಒಳಪಡಿಸಿ, ದೌರ್ಜನ್ಯವೆಸಗಿತು. ಇಂತಹ ಧಾರುಣ ಸ್ಥಿತಿಯಲ್ಲಿ ಅಕ್ಕಮಹಾದೇವಿ ಸೇರಿದಂತೆ ಎಲ್ಲಾ ಶಿವಶರಣೆಯರು ಕ್ರಾಂತಿಕಾರಿ ಕಹಳೆಯನ್ನು ಊದಿ, ಆಧ್ಯಾತ್ಮದತ್ತ ಹೆಜ್ಜೆ ಹಾಕಿದರು.

ಕಳೆದ 20 ವರ್ಷಗಳಲ್ಲಿ ಅನೇಕ ಬದಲಾವಣೆಗಳು ಕಂಡುಬಂದಿದೆ. ಕಾನೂನುಗಳು ಸೇರಿದಂತೆ ಸರ್ಕಾರವು ಮಹಿಳೆಯರಿಗಾಗಿ ಎಲ್ಲಾ ಸ್ತರಗಳಲ್ಲೂ ಶೇ.33 ರಷ್ಟು ಮೀಸಲಾತಿ ಒದಗಿಸಿದ್ದು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ ಎಂದು ಸಾಬೀತುಪಡಿಸುತ್ತಿದ್ದಾಳೆ.

ಮಾನಸಿಕವಾಗಿ ಹಾಗೂ ದೈಹಿಕವಾಗಿ ಪುರುಷನೊಂದಿಗೆ ಪೈಪೋಟಿ ನಡೆಸುತ್ತಿದ್ದಾಳೆ. ಇಡೀ ಕುಟುಂಬದ ಜವಾಬ್ಧಾರಿಯನ್ನು ವಹಿಸಿಕೊಳ್ಳುತ್ತಿದ್ದಾಳೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ತೂ.ಕ.ಶಂಕರಯ್ಯ ಮಾತನಾಡಿ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಮಹಿಳೆಯರನ್ನು ಕುರಿತು ಸ್ತ್ರೀ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ ಎಂದು ಮನುಸ್ಮøತಿಯು ವಿಧಿಸಿದ ಕಟ್ಟುಪಾಡು ವೈಜ್ಞಾನಿಕ ಯುಗದಲ್ಲೂ ಮುಂದುವರೆಯುತ್ತಿರುವುದು ದುರಂತ. ಆದರೆ ಈಗ ಕಾಲ ಬದಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತೀಯ ನಾರಿ ಈಗ ಪುರುಷನಿಗೆ ಸಮಾನಳು. ಹೆಣ್ಣು-ಗಂಡು ಸರಿಸಮಾನರೆಂದು ತಾತ್ವಿಕವಾಗಿ ಒಪ್ಪಿಕೊಂಡಿರುವ ಅಂಶವಾಗಿದೆ ಎಂದರು.

ಪುರುಷನ ಪ್ರತೀ ಸಾಧನೆಯ ಹಿಂದೆ ಹೆಣ್ಣಿರುತ್ತಾಳೆ. ಮಹಿಳೆಯಿಲ್ಲದೇ ಗಂಡು ಪರಿಪೂರ್ಣನಾಗಲಾರ. 12ನೇ ಶತಮಾನದಲ್ಲಿ ಆಯ್ದಕ್ಕಿ ಲಕ್ಕಮ್ಮ ತನ್ನೆಲ್ಲಾ ಆಸೆ ಆಕಾಂಕ್ಷೆಗಳನ್ನು ಬದಿಗೊತ್ತಿ ತನ್ನ ಗಂಡನನ್ನು ತಿದ್ದುವ ಮೂಲಕ ಕಾಯಕ ನಿಷ್ಠೆಯನ್ನು ಬೆಳೆಸುತ್ತಾಳೆ. ಇಂದಿನ ಭ್ರಷ್ಟಾಚಾರ ಯುಗದಲ್ಲಿ ಆಯ್ದಕ್ಕಿ ಲಕ್ಕಮ್ಮ ಸಮಾಜಕ್ಕೆ ಮಾದರಿಯಾಗುತ್ತಾಳೆ. ತನ್ನ ಮನೆಯವರನ್ನು ತಿದ್ದುವ ಮೂಲಕ ಸಂಸಾರದ ಆರ್ಥಿಕ ಸ್ಥಿತಿಯನ್ನು ಸುಧಾರಿಸುತ್ತಿದ್ದಾಳೆ.

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನುಗ್ಗುತ್ತಿದ್ದು, ಆಕೆಯನ್ನು ಕೇವಲ ಗೌರವಿಸುವುದಲ್ಲದೇ ಸರಿಸಮಾನವಾಗಿ ಕಾಣುವ ಮನಸ್ಥಿತಿ ಬೆಳೆಸಿಕೊಳ್ಳಬೇಕು ಎಂದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಮುಖ್ಯನ್ಯಾಯಿಕ ದಂಡಾಧಿಕಾರಿಗಳಾದ ಪ್ರೀತಿ ಎಸ್. ಜೋಶಿ ಮಾತನಾಡಿ, ಮಹಿಳೆಯರು ಕಾನೂನುಗಳನ್ನು ಅರ್ಥಮಾಡಿಕೊಳ್ಳುವ ಮೂಲಕ ಅವುಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು.

ಉದ್ಯೋಗಸ್ಥ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅನೇಕ ಕಾಯ್ದೆ ಕಾನೂನುಗಳು ಜಾರಿಯಾಗಿದ್ದು ಮಹಿಳೆಯರು ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ನಾವು ಅನಪೇಕ್ಷಿತ ವ್ಯಕ್ತಿಗಳಿಂದ ತೊಂದರೆಯುಂಟಾದಾಗ ಮಾತ್ರ ಬಳಸಿಕೊಳ್ಳಬೇಕು. ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ಬಾಲ್ಯವಿವಾಹ, ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಶೋಷಣೆಗಳಂತಹ ಸಂದರ್ಭದಲ್ಲಿ ಕಾನೂನಿನ ಸಹಾಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಎಲ್.ಹೆಚ್. ಅರುಣ್‍ಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರವೀಣ್ ನಾಯಕ್, ನ್ಯಾಯಾಧೀಶರಾದ ರಶ್ಮೀ ಎಂ.ಮರಡಿ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ನಂದಿನಿ.ಎಂ.ಎನ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎಸ್.ಸಿ. ಸಂಚಾಲಕ ಪ್ರೊ.ಟಿ.ವೀರೇಶ್, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಎಂ.ಎಲ್.ತ್ರೀವೇಣಿ, ಪ್ರೋ.ಭೀಮಣ್ಣ ಸುಣಗಾರ್, ಡಾ.ಮಹೇಶ್.ಎನ್.ಪಾಟೀಲ್, ಡಾ.ದಾದಾಪೀರ್ ನವಿಲೇಹಾಳ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending