Connect with us

ಕ್ರೀಡೆ

ದಾವಣಗೆರೆ ‘ಕುಸ್ತಿಪಟು ವಿಕಾಸ ಗೌಡ’ ನಿಧನ

Published

on

ಸುದ್ದಿದಿನ, ದಾವಣಗೆರೆ| ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದ ಕುಸ್ತಿ ಪಟು ವಿಕಾಸ್ ಗೌಡ (20)  ಸಾವನ್ನಪ್ಪಿದ್ದಾರೆ.

ನಗರದ  ಕ್ರೀಡಾ ನಿಲಯದಲ್ಲಿ ನಾಲ್ಕು ವರ್ಷದಿಂದ ತರಬೇತಿ ಪಡೆಯುತ್ತಿದ್ದ ಇವರು ಮೈಸೂರು ಜಿಲ್ಲೆಯ ಸೀತಾಪುರ ಗ್ರಾಮದವರು. ರಾಷ್ಟ್ರೀಯ ಮಟ್ಟದ ಕುಸ್ತಿಯಲ್ಲಿ ಹೆಸರು ಮಾಡಿದ ಕ್ರೀಡಾ ಪಟು ಇವರು. ಬೆನ್ನು ಹುರಿಗೆ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ (ಆಗಸ್ಟ್‌ 1) ಇಂದು ಸಾವನ್ನಪ್ಪಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ17 hours ago

ಬಿಎಸ್ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ನಿಂದ ವಿದ್ಯಾರ್ಥಿ ವೇತನ ವಿತರಣೆ

ಸುದ್ದಿದಿನ,ದಾವಣಗೆರೆ:ಗುರಿ ಸಾಧಿಸಲು ಕಾರಣಗಳು ನೆಪವಾಗಬಾರದು. ಗುರಿಯನ್ನು ಬೆನ್ನು ಹತ್ತಿ ಗುರಿಮುಟ್ಟುವ ಕಡೆ ಗಮನ ಹರಿಸಿದರೆ ಯಶಸ್ಸು ತಾನಾಗಿ ದೊರೆಯುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್...

ಅಂತರಂಗ19 hours ago

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ...

ದಿನದ ಸುದ್ದಿ1 week ago

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ...

ದಿನದ ಸುದ್ದಿ1 week ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ದಿನದ ಸುದ್ದಿ1 week ago

ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸುದ್ದಿದಿನ,ದಾವಣಗೆರೆ:ಜಗಳೂರು ಪಟ್ಟಣದಲ್ಲಿ ಜನವರಿ 11 ಮತ್ತು 12 ರಂದು ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಜನವರಿ 11...

ದಿನದ ಸುದ್ದಿ2 weeks ago

ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’

ಸುದ್ದಿದಿನ,ಸಂತೇಬೆನ್ನೂರು:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಸೋಮವಾರ ‘ವಿಶ್ವಮಾನವ ದಿನಾಚರಣೆ’ಯನ್ನು ಆಯೋಜಿಸಲಾಗಿತ್ತು. ಜಗತ್ತಿಗೆ ವಿಶ್ವಮಾನವತೆಯ ಸಂದೇಶವನ್ನು ಸಾರಿದ ಜಗದ ಕವಿ...

ದಿನದ ಸುದ್ದಿ2 weeks ago

ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು

ವಿಶೇಷ ವರದಿ | ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ:ತಾಲೂಕಿನ ಬುಕ್ಕಸಾಗರದಲ್ಲಿ ಅಕ್ರಮ ಗಣಿಗಾರಿಕೆ, ಹಲವು ವರ್ಷಗಳಿಂದ ನಿರಂತರವಾಗಿ ಬುಕ್ಕಸಾಗರ, ವೆಂಕಟಾಪುರ, ವೆಂಕಟಾಪುರ ಕ್ಯಾಂಪ್ , ರಾಮಸಾಗರದಲ್ಲಿ...

ದಿನದ ಸುದ್ದಿ2 weeks ago

ಹಂಪಿ ಮೃಗಾಲಯದಲ್ಲಿ ಸೂಕ್ತ ನಿರ್ವಹಣೆ ಮತ್ತು ಮೂಲಸೌಕರ್ಯಗಳದ್ದೇ ಕೊರತೆ : ಪ್ರವಾಸಿಗರ ಆರೋಪ

ವರದಿ : ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಹೊಸಪೇಟೆ: ಉತ್ತರ ಕರ್ನಾಟಕದ ಏಕೈಕ ಸಫಾರಿ ಮೃಗಾಲಯ ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್(ಹಂಪಿ ಜೂ) ಆಗಿದ್ದು, ಇಲ್ಲಿ...

ದಿನದ ಸುದ್ದಿ3 weeks ago

2017 ರಿಂದ 2023 ಅವಧಿಯ ಅಭಿವೃದ್ಧಿ ಹಾಗೂ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು ಪ್ರಕಟ ; ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ,ಬೆಂಗಳೂರು:ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು ಪರಿಸರ...

ದಿನದ ಸುದ್ದಿ3 weeks ago

ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್

ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ...

Trending