ದಿನದ ಸುದ್ದಿ

ಮಾರ್ಚ್ 12 ರಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವ

Published

on

ಸುದ್ದಿದಿನ,ದಾವಣಗೆರೆ : ವಿಶ್ವವಿದ್ಯಾನಿಲಯದ 11ನೇ ಘಟಿಕೋತ್ಸವವು ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಗೆ ತೋಳಹುಣಸೆಯಲ್ಲಿನ ಜ್ಞಾನಸೌಧ ಶಿವಗಂಗೋತ್ರಿ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ವಹಿಸುವರು.
ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಉಪಸ್ಥಿತರಿರುವರು.

ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ದಾವಣಗೆರೆ ವಿ.ವಿ. ಕುಲಪತಿಗಳಾದ ಪ್ರೊ.ಬಿ.ಡಿ.ಕುಂಬಾರ, ಕುಲಸಚಿವರಾದ ಪ್ರೊ.ರಮೇಶ.ಸಿ.ಕೆ, ಕುಲಸಚಿವರು(ಪ್ರಭಾರ) ಪ್ರೊ.ವೆಂಕಟರಾವ್.ಎಂ.ಪಲಾಟೆ ಭಾಗವಹಿಸುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version