Connect with us

ದಿನದ ಸುದ್ದಿ

ಬೆಳಗಿನ ಪ್ರಮುಖ ಸುದ್ದಿಗಳು | ಕೆಎಸ್ಒಯು ಅರ್ಜಿ ಆಹ್ವಾನ : ಚಂದ್ರಯಾನ ನೇರ ಪ್ರಸಾರ

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಕಾವೇರಿ ಹಾಗೂ ಮಹದಾಯಿ ಜಲವಿವಾದಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.
  2. ಚಂದ್ರಯಾನ 3 ನೌಕೆಯ ವಿಕ್ರಮ್ ಲ್ಯಾಂಡರ್ ನಿರೀಕ್ಷೆಯಂತೆ ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಇಳಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಸಿದ್ಧತೆ ಮಾಡಿಕೊಂಡಿದೆ. ಇಸ್ರೋದ ಜಾಲತಾಣ ಹಾಗೂ ಯೂಟ್ಯೂಬ್ ವಾಹಿನಿ, ಡಿಡಿ ನ್ಯಾಷನಲ್ ವಾಹಿನಿಗಳಲ್ಲಿ ಸಂಜೆ 5.27 ರಿಂದ ಚಂದ್ರಯಾನದ ನೇರಪ್ರಸಾರ ಮೂಡಿಬರಲಿದೆ.
  3. ಕನ್ನಡ ನಾಡು ಎಂದು ನಾಮಕರಣಗೊಂಡು 50 ವರ್ಷಗಳು ಸಂದ ಸಂದರ್ಭವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
  4. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಸಾಲ ಒದಗಿಸಲಾಗುವುದು ಎಂದು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
  5. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳು ಸಾಲ ಪಡೆಯದೇ ಇರುವವರಿಗೆ ಪ್ರಧಾನಮಂತ್ರಿ ಪಿ.ಎಂ ಸ್ವನಿಧಿ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  6. ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕ್ಷೇತ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಸೂಚಿಸಿದ್ದಾರೆ.
  7. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಇದೇ 31 ಕೊನೆ ದಿನ. ಹೆಚ್ಚಿನ ವಿವರಗಳು ಜಾಲತಾಣ www.ksoumysuru.ac.in ನಲ್ಲಿ ಲಭ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending