Connect with us

ದಿನದ ಸುದ್ದಿ

ರಸ್ತೆ ಸುರಕ್ಷತಾ ಸಮಿತಿ ಸಭೆ | ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ : ಡಿಸಿ ಗಂಗಾಧರಸ್ವಾಮಿ ಜಿ.ಎಂ.

Published

on

ಸುದ್ದಿದಿನ,ದಾವಣಗೆರೆ:ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು (ನ.15) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳಿಂದ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿ ಕೂಡಲೆ ತೆರವುಗೊಳಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ಪೆÇಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಜಂಟಿ ಪರಿವೀಕ್ಷಣೆಯನ್ನು ಮಾಡಿ ಅವಶ್ಯಕತೆ ಇದ್ದರೆ, ವೈಜ್ಞಾನಿಕ ವೇಗತಡೆಗಳನ್ನು ಅಳವಡಿಸಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ವೈಜ್ಞಾನಿಕ ವೇಗತಡೆಗಳಿಗೆ ಥರ್ಮೋಪ್ಲಾಸ್ಟಿಕ್ ಬಣ್ಣವನ್ನು ಅಳವಡಿಸುವುದರ ಜೊತೆಗೆ ವೇಗತಡೆ ಗೋಚರಿಸುವಂತೆ ರೋಡ್ ಸ್ಟಡ್‍ಗಳನ್ನು ಅಳವಡಿಸುವುದು ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕಿಸುವ ಎಲ್ಲಾ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹೆಚ್ಚು ಮಳೆಯ ಆದ ಪರಿಣಾಮ ರಸ್ತೆಗಳು ಕಿತ್ತು ಹೋಗಿರುವುದು ಹಾಗೂ ಕೆಲವು ಸ್ಥಳಗಳಲ್ಲಿ ಗುಂಡಿಗಳು ಸಹ ನಿರ್ಮಾಣವಾಗಿದ್ದು. ಇದರಿಂದ ರಸ್ತೆ ಬಳಕೆದಾರರಾದ ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಾಗಿ ಲಘು ಅಪಘಾತಗಳು, ಇಲ್ಲವೇ ಮಾರಣಾಂತಿಕ ಅಪಘಾತಗಳು ಅಗುವುದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಎಂದು ತಿಳಿಸಿದರು.

ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ಪಡೆಯಲು ಮೀಟರ್‍ನ್ನು ಅಳವಡಿಸಬೇಕು. ಅದೇ ರೀತಿ ಆಟೋರಿಕ್ಷಾ ಚಾಲಕನ ಸೀಟ್ ಹಿಂಭಾಗದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಾಹನ ಮತ್ತು ಚಾಲನಾ ಹಾಗೂ ಮಾಲೀಕರ ಪೂರ್ಣ ಮಾಹಿತಿಯನ್ನು ಒಳಗೊಂಡ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದು ವೇಳೆ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಲು ಸೂಚಿಸಿ ಅನಧಿಕೃತ ಆಟೋ ಸ್ಟಾಂಡ್‍ಗಳನ್ನು ತೆರವುಗೊಳಿಸಬೇಕು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ ಹರಿಹರ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹರಿಹರ ನಗರಸಭೆಯವತಿಯಿಂದ ಹಾಗೂ ಸುಗಮ ಸಂಚಾರಕ್ಕೆ ಬೇಕಾಗುವ ಸಿಗ್ನಲ್ ಲೈಟ್ಸ್, ಸಿಸಿ ಕ್ಯಾಮೆರಾ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಜಯ್‍ಕುಮಾರ್ ಎಂ.ಸಂತೋಷ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ವೀರೇಶ್, ಇಂಜಿನಿಯರ್ಸ್ , ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending