ದಿನದ ಸುದ್ದಿ
ಜಿಲ್ಲಾಧಿಕಾರಿ ಕಚೇರಿ ಮುಂದೆ ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ
ಸುದ್ದಿದಿನ,ಬೆಳಗಾವಿ: ಎರಡು ಸಮುದಾಯಗಳಿಗೆ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದ ಹಿನ್ನೆಲೆ ಮೃತ ಶವವನ್ನು ಡಿಸಿ ಕಚೇರಿಯ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಎಣಗಿ ಗ್ರಾಮದಲ್ಲಿ ನಡೆದಿದೆ.
ಏಣಗಿ ಗ್ರಾಮದ 65 ವರ್ಷದ ಅಬ್ದುಲ್ ಖಾದರ್ ಮಿಶ್ರಿಕೋಟಿ ಅನಾರೋಗ್ಯದಿಂದ ನಿಧನರಾಗಿದ್ದರು. ಮೃತರ ಶವವನ್ನು ಸಾಗಿಸಲು ದಾರಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಶವವನ್ನು ಹೂಳುವುದಾಗಿ ಪ್ರತಿಭಟನೆ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243