ದಿನದ ಸುದ್ದಿ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ಹೋರಾಟ : ಬಿಜೆಪಿ ಆಕ್ರೋಶ
ಸುದ್ದಿದಿನಡೆಸ್ಕ್:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಬುಡಕಟ್ಟು ಕಲ್ಯಾಣ ಮಂಡಳಿ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಮೈಸೂರು ಚಲೋ ಪಾದಯಾತ್ರೆಯ 4ನೇ ದಿನವಾದ ಇಂದು ಮದ್ದೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರಿಗೆ ಹೋರಾಟ ಮುಂದುವರೆಯಲಿದೆ ಎಂದು ಘೋಷಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಿದೆ. ಆದರೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ್ದಾರೆ. ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243