ದಿನದ ಸುದ್ದಿ
ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
ಸುದ್ದಿದಿನಡೆಸ್ಕ್:ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಯಾರಿಂದಲೂ ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮಂಡ್ಯ ನಗರದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದ ಶಕ್ತಿಯಾಗಿದ್ದು, ಬಿಜೆಪಿ ಮತ್ತು ಜೆಡಿಎಸ್ ಕುತಂತ್ರದಿಂದ ಸರ್ಕಾರ ಕೆಡವಲು ಹೊರಟಿದ್ದಾರೆ. ಅವರ ಪಾದಯಾತ್ರೆ, ಅವರು ಮಾಡಿದ ಹಗರಣಗಳ ಪಾಪದ ವಿಮೋಚನೆಯ ಯಾತ್ರೆ ಎಂದು ವ್ಯಾಖ್ಯಾನಿಸಿದ್ದಾರೆ.
ಜನವಿರೋಧಿ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್ ಜನಾಂದಲೋನ ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು. ಸಮಾವೇಶದಲ್ಲಿ 12 ಸಚಿವರು ಹಾಗೂ ರಾಜ್ಯ ಕಾಂಗ್ರೆಸ್‌ನ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243