Connect with us

ಸಿನಿ ಸುದ್ದಿ

ನಟಿ ಮಾಲಾಶ್ರೀ ಪತಿ ಕೋಟಿ ರಾಮು ಕೊರೋನಾಗೆ ಬಲಿ

Published

on

ಸುದ್ದಿದಿನ, ಬೆಂಗಳೂರು: ಸ್ಯಾಂಡಲ್ ವುಡ್ ನ ಕೋಟಿ‌ ರಾಮು ಎಂದೇ ಪ್ರಖ್ಯಾತರಾಗಿದ್ದ , ನಟಿ ಮಾಲಾಶ್ರೀ ಅವರ ಪತಿ, ನಿರ್ಮಾಪಕ ರಾಮು ಅವರು ಕೊರೋನಾದಿಂ ಸೋಮವಾರ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಳೆದ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿರ್ಮಾಪಕ ರಾಮು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ಸ್ಯಾಂಡಲ್ ವುಡ್ ಗೆ ಆಘಾತ ಉಂಟು ಮಾಡಿದೆ.

ಎಕೆ47, ಕಲಾಸಿಪಾಳ್ಯ, ಸಿಬಿಐ ದುರ್ಗ, ಸಿಂಹದ ಮರಿ ಸೇರಿದಂತೆ ಹಲವು ಯಶಸ್ವೀ ಚಿತ್ರಗಳನ್ನು ಇವರು ನಿರ್ಮಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಲೈಫ್ ಸ್ಟೈಲ್

ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ಮಧ್ಯೆ ಸದಾ ಕಿರಿಕಿರಿ,ವಿರಸ, ಜಿಗುಪ್ಸೆ, ಕೊನೆ ಘಳಿಗೆ ವಿಚ್ಛೇದನ ಹೆಚ್ಚಾಗುತ್ತಿದೆ ಏಕೆ?

Published

on

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ.

ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು.

ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ.

ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ,

7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ.

7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ.

7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ.

ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

Continue Reading

ರಾಜಕೀಯ

ಮಸ್ಕಿ ಬಿಜೆಪಿ ಅಭ್ಯರ್ಥಿ ಪರ ಇಂದು ಸಿಂಗರ್ ಮಂಗ್ಲಿ ಪ್ರಚಾರ

Published

on

ಸುದ್ದಿದಿನ,ರಾಯಚೂರು: ರಾಬರ್ಟ್ ಸಿನೆಮಾ ‘ಕಣ್ಣೆ ಅದಿರಿಂದಿ’ ಹಾಡಿನ ಮೂಲಕ ಭಾರೀ ಸದ್ದು ಮಾಡಿದ ಗಾಯಕಿ ಮಂಗ್ಲಿ ಮಸ್ಕಿ ಉಪ ಚುನಾವಣಾ ಅಖಾಡದಲ್ಲಿ ಮಂಗಳವಾರ ಬಿಜೆಪಿ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಬಿಜೆಪಿಯು ಗಾಯಕಿ ಮಂಗ್ಲಿ ಅವರನ್ನ ಪ್ರಚಾರಕ್ಕೆ ಆಹ್ವಾನಿಸಿದ್ದು, ಇಂದು ಮಸ್ಕಿ ಕೆಲ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಮತಯಾಚಿಸಲಿದ್ದಾರೆ. ಆದರೆ ಚುನಾವಣಾ ಅಭ್ಯರ್ಥಿ ಪ್ರತಾಪ್‌ ಗೌಡ ಪಾಟೀಲರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

ಚುನಾವಣಾ ಅಭ್ಯರ್ಥಿ, ಪ್ರತಾಪ್‌ ಗೌಡ ಪಾಟೀಲ

ಇದೇ 17 ರಂದು ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ರಣತಂತ್ರವನ್ನು ಹೂಡಿದ್ದಾರೆ.

ಇದನ್ನೂ ಓದಿ | ಕವಿತೆ | ಅವಳು ಮಸಣ ಕಾಯುವ ಪಾರ್ವತಿ..! -ಪದ್ಮಶ್ರೀ ಗೋವಿಂದರಾಜು,ಭದ್ರಾವತಿ

ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ನೆಲಸವಾಗುವುದು ನಿಶ್ಚಿತ. 3 ಕ್ಷೇತ್ರಗಳಲ್ಲೂ ದೊಡ್ಡ ಮತಗಳ ಅಂತರದಲ್ಲಿ ನಾವೇ ಗೆಲ್ಲುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಇತ್ತ ಮೂರು ಪಕ್ಷಗಳ ಮತಯಾಚನೆಯ ಕಾವು ಏರುತ್ತಲೇ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಮಿಳು ನಟ ವಿಜಯ್ ಸೈಕಲ್ ನಲ್ಲಿ ಬಂದು ಓಟ್ ಮಾಡಿದ್ದೇಕೆ..? ನಟನ ಆಪ್ತರು ಹೇಳಿದ್ದೇನು ಗೊತ್ತಾ..?

Published

on

ಸುದ್ದಿದಿನ,ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಮಂಗಳವಾರ ನಡೆಯಿತು. ನಟ, ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ಸೈಕಲ್‍ನಲ್ಲಿ ಮತಗಟ್ಟೆಗೆ ಬಂದು ವೋಟ್ ಹಾಕಿದ್ದು, ನಟ ವಿಜಯ್ ಗೆ‌ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಟ ಇಳಯದಳಪತಿ ವಿಜಯ್ ಅವರು ಸೈಕಲ್‍ನಲ್ಲಿ ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ ನ್ಯಾಷನಲ್ ಪ್ರೀ ಸ್ಕೂಲ್ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಅಭಿಮಾನಿಗಳು ನಟ ವಿಜಯ್ ಅವರ ಜೊತೆಯಲ್ಲಿ ಸೆಲ್ಫೀ, ಫೋಟೋ ಮತ್ತು ವೀಡಿಯೋವನ್ನು ಕ್ಲಿಕ್ಕಿಸಿಕೊಂಡರು. ಈ ಫೋಟೋಗಳು ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಮಂಗಳವಾರ ಸಖತ್ ವೈರಲ್ ಆಗಿದ್ದಾವೆ.

ನಟ ವಿಜಯ್ ಅಭಿಮಾನಿಗಳು ರಸ್ತೆ ಮಧ್ಯದಲ್ಲಿ ಅವರನ್ನು ಸುತ್ತವರಿದ ಕಾರಣ ಅವರು ಮತಗಟ್ಟೆಗೆ ಸೈಕಲ್ ನಲ್ಲಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ನಂತರ ನಟ ವಿಜಯ್ ತಮ್ಮ ಸಿಬ್ಬಂದಿಯವರ ದ್ವಿಚಕ್ರವಾಹನದಲ್ಲಿ ಹಿಂದೆ ಕುಳಿತು ಮತಗಟ್ಟೆಗೆ ಹೋದರು. ಮತಗಟ್ಟೆಯ ಬಳಿ ಹಲವಾರು ಅಭಿಮಾನಿಗಳು ನಟ ವಿಜಯ್ ನೋಡಲು ನೆರೆದಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಚ್‌ ಕೂಡ ಮಾಡಬೇಕಾಯಿತು.

ಇಳಯ ದಳಪತಿ ವಿಜಯ್ ಅವರು ಮಾಸ್ಕ್ ಧರಿಸಿಕೊಂಡು ಸೈಕಲ್‌ನಲ್ಲಿ ಮತಗಟ್ಟೆಗೆ ಬಂದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದಂತೆ, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದರು. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಲು ವಿಜಯ್ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಬಾರೀ ಚರ್ಚೆ ನಡೆಯಿತು.

ಸೈಕಲ್ ನಟ ವಿಜಯ್ ಬಂದಿದ್ದೇಕೆ..?

ಕಾರ್ ಪಾರ್ಕಿಂಗ್ ಸಮಸ್ಯೆಯನ್ನು ತಪ್ಪಿಸಲು ನಟ ವಿಜಯ್ ಅವರು ಸೈಕಲ್ ನಲ್ಲಿ ಬಂದು ಮತ ಚಲಾಯಿಸಿದರು. ಆದರೆ ಮತಗಟ್ಟೆ ಇರುವ ಕಿರಿದಾದ ಬೀದಿಯಲ್ಲಿ ಪಾರ್ಕಿಂಗ್ ತೊಂದರೆ ತಪ್ಪಿಸಲು ವಿಜಯ್ ಸೈಕಲ್ ನಲ್ಲಿ ಬಂದರು ಎಂದು ಅವರ ಪಿ ಆರ್ ಓ ಸ್ಪಷ್ಟಪಡಿಸಿದ್ದಾರೆ.

“ತಲಪತಿ ವಿಜಯ್ ಅವರು ಕಾರನ್ನು ಬಳಸುವ ಬದಲು ಸೈಕಲ್‌ನಲ್ಲಿ ಹೋಗಲು ನಿರ್ಧರಿಸಿದರು ಏಕೆಂದರೆ ಮತದಾನ ಕೇಂದ್ರವು ಅವರ ನಿವಾಸದ ಪಕ್ಕದಲ್ಲಿಯೇ ಇತ್ತು ಮತ್ತು ಕಾರಿನಲ್ಲಿ ಹೋಗುವುದರಿಂದ ರಸ್ತೆಯಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಬಹುದು. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿರಲಿಲ್ಲ!” – ರಿಯಾಜ್ ಕೆ ಅಹ್ಮದ್ ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending