ದಿನದ ಸುದ್ದಿ
ಡಿಸಿಸಿ ಬ್ಯಾಂಕ್‌ನಲ್ಲಿ ಸಾಲಪಡೆದು ಕೋವಿಡ್‌ನಿಂದ ಮೃತಪಟ್ಟವರ ಸಾಲ ಮನ್ನಾ: ಎಸ್ ಟಿ ಸೋಮಶೇಖರ್
ಸುದ್ದಿದಿನ, ಮೈಸೂರು : ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್ ಗಳಿಂದ ಸಾಲ ಪಡೆದಿರುವವರು ಕೋವಿಡ್ ನಿಂದ ಮೃತಪಟ್ಟಿದ್ದರೆ ಅಂಥವರ ಪಟ್ಟಿ ಹಾಗೂ ಸಾಲ ವಿವರವನ್ನು ಕೊಡುವಂತೆ ಈಗಾಗಲೇ ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಎಂಡಿಗಳಿಗೆ ನಾನು ಸೂಚನೆಯನ್ನು ನೀಡಿದ್ದೇನೆ. ಶೀಘ್ರದಲ್ಲಿಯೇ ವಿವರಗಳನ್ನು ಪಡೆದು ಕಾರ್ಯಕ್ರಮವನ್ನು ಆಯೋಜಿಸಿ ಸಾಲಮನ್ನಾವನ್ನು ಘೋಷಿಸಲಾಗುವುದು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243