Connect with us

ದಿನದ ಸುದ್ದಿ

ಹೋಳಿ ಸೀಮಿತ ಆಚರಣೆಗೆ ನಿರ್ಧಾರ : ಬಣ್ಣದ ಬಂಡಿ ಮೆರವಣಿಗೆ, ರೇನ್‍ಡ್ಯಾನ್ಸ್ ನಿಷೇಧ

Published

on

ಸುದ್ದಿದಿನ,ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಮಾರ್ಚ 29 ರಿಂದ 31 ವರೆಗೆ ಮೂರು ದಿನಗಳ ಕಾಲ ಜರುಗಲಿರುವ ಹೋಳಿ ಆಚರಣೆಯಲ್ಲಿ ಬಣ್ಣದ ಬಂಡಿ ಮೆರವಣಿಗೆ, ರೇನ್‍ಡ್ಯಾನ್ಸ್ ಹಾಗೂ ಸಾಮೂಹಿಕವಾಗಿ ಆಚರಣೆಗೆ ಆಯೋಜನೆ ಮಾಡುವದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಬಾಂಗಣದಲ್ಲಿ ಬುಧವಾರ ಜರುಗಿದ ಹೋಳಿ ಆಚರಣೆ ಕುರಿತ ಶಾಂತತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾಂಪ್ರದಾಯಿಕವಾಗಿ ಹಾಗೂ ಐತಿಹಾಸಿಕವಾಗಿ ಸುಮಾರು ವರ್ಷಗಳಿಂದ ಹೋಳಿ ಹಬ್ಬವನ್ನು ವಿಜೃಂಭನೆಯಿಂದ ಆಚರಿಸುತ್ತಾ ಬಂದಿದ್ದು, ಕಳೆದ ಒಂದು ವರ್ಷದಿಂದ ಕೋವಿಡ್ ಮಹಾಮಾರಿ ಸೋಂಕು ರೋಗದ ಹಾವಳಿಯಿಂದಾಗಿ ಜನರ ಆರೋಗ್ಯದ ದೃಷ್ಠಿಯಿಂದ ಈ ವರ್ಷ ಹೋಳಿ ಹಬ್ಬವನ್ನು ಸೀಮಿತವಾಗಿ ಆಚರಿಸುವ ಅವಶ್ಯಕತೆ ಇದೆ ಎಂದರು.

ಇದನ್ನೂ ಓದಿ | ಪೆಟ್ರೋಲ್ 18 ಪೈಸೆ, ಡೀಸೆಲ್ 17 ಪೈಸೆ ಇಳಿಕೆ

ಧಾರ್ಮಿಕವಾಗಿ ಕೈಗೊಳ್ಳುವ ಆಚರಣೆಗೆ ಸಂಬಂಧಿಸಿದಂತೆ ವಿಧಿ ವಿಧಾನಗಳನ್ನು ಪೂಜೆಗೆ ಸೀಮಿತಗೊಳಿಸಲಾಗಿದೆ. ತಮ್ಮ ಕುಟುಂಬ ಹಾಗೂ ಗೆಳೆಯರ ಜೊತೆ ಬಣ್ಣದ ಆಟವನ್ನು ಆಡಬಹುದಾಗಿದೆ. ಕೋವಿಡ್ 2ನೇ ಅಲೇ ಹರಡಬಹುದಾಗ ರೋಗದ ಗಂಭೀರತೆಯನ್ನು ಅರಿತು ಸಾಂತಿಯುತವಾಗಿ ಹಾಗೂ ಅರ್ಥಪೂರ್ಣವಾಗಿ ಹಬ್ಬ ಆಚರಿಸಬೇಕು. ಜನರ ಆರೋಗ್ಯದ ದೃಷ್ಠಿಯಿಂದ ಜಿಲ್ಲಾಡಳಿತದಿಂದ ಹೊರಡಿಸಲಾದ ಮಾರ್ಗ ಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಕೋವಿಡ್ 2ನೇ ಅಲೇ ಹಿನ್ನಲೆಯಲ್ಲಿ ಮುಂಜಾಗ್ರತಾ ದೃಷ್ಠಿಯಿಂದ ಹೋಳಿ ಹಬ್ಬವನ್ನು ಸೀಮಿತ ಆಚರಣೆಗೆ ನಿರ್ಧರಿಸಲಾಗಿದ್ದು, ತಮ್ಮ ಪರಿವಾರದ ಜೊತೆ, ಗೆಳೆಯರ ಜೊತೆ ಹಾಗೂ ಓಣಿಗೆ ಸೀಮಿತವಾಗಿ ಹೊಳಿ ಆಚರಿಸಬೇಕು.

ರೋಗ ಹರಡಲಿಕ್ಕೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಕೋವಿಡ್ ಹಿನ್ನಲೆಯಲ್ಲಿ ಮಾದರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿ. ಹಬ್ಬದ ಆಚರಣೆಯಲ್ಲಿ ಅಜಾಗರುಕತೆ ಬೇಡ, ಸುರಕ್ಷತೆ ದೃಷ್ಠಿಯಿಂದ ಮಾಸ್ಕ, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಸುವಂತೆ ತಿಳಿಸಿದರು.

ಶಾಂತತಾ ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ, ನಗರಸಭೆ ಪೌರಾಯುಕ್ತ ಮುನಿಷಾಮಪ್ಪ, ಆಚರಣೆ ಸಮಿತಿಯ ಮುಖಂಡರಾದ ಕಳಕಪ್ಪ ಬಾದೊಡಗಿ, ಬಸವರಾಜ ಕಟಗೇರಿ, ಅಶೋಕ ಮುತ್ತಿನಮಠ, ಶಾಂತತಾ ಸಮಿತಿಯ ಎ.ಎ.ದಾಂಡಿಯಾ, ಕುತುಬುದ್ದಿನ ಖಾಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending