ದಿನದ ಸುದ್ದಿ

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ತೀರ್ಮಾನ

Published

on

ಸುದ್ದಿದಿನ,ಬೆಂಗಳೂರು: ಮೈಸೂರಿನಲ್ಲಿರುವ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾದುಸ್ವಾಮಿ ಅವರು ಇದನ್ನು ಪ್ರಕಟಿಸಿದರು.

ಪ್ರಜಾಪ್ರಭುತ್ವದ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದ ಅವರ ಹೆಸರನ್ನು ಇತಿಹಾಸದಲ್ಲಿ ಶಾಶ್ವತವಾಗಿಡಲು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version