ದಿನದ ಸುದ್ದಿ

ಹದಿನಾಲ್ಕು ಕೃಷಿ ಉತ್ಪನ್ನಗಳಿಗೆ ಕೇಂದ್ರದಿಂದ ಕನಿಷ್ಠ ಬೆಂಬಲ ಬೆಲೆ ಘೋಷಣೆ : ಸಚಿವ ಬಿ.ಸಿ.ಪಾಟೀಲ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಭತ್ತ, ಜೋಳ, ರಾಗಿ ದ್ವಿದಳ ಧಾನ್ಯಗಳು ಸೇರಿದಂತೆ 14 ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022-23ನೇ ಸಾಲಿಗಾಗಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಿನ್ನೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬೇಸಾಯದ ಪ್ರದೇಶವನ್ನು ವಿಸ್ತರಿಸಲು ಹಾಗೂ ವಿವಿಧ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಿತ್ತನೆ ಆರಂಭಕ್ಕೂ ಮುನ್ನವೇ ಯಾವ ಯಾವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಲಾಗಿದೆ ಎಂಬ ಬಗ್ಗೆ ರೈತರಿಗೆ ಮಾಹಿತಿ ಸಿಗಬೇಕು ಇದರಿಂದ ರೈತರು ಮುಂದೆ ಯಾವ ಬೆಳೆ ಬೆಳೆಯಬೇಕು ಎಂಬ ನಿರ್ಧಾರ ಕೈಗೊಳ್ಳಲು ಸಹಕಾರಿಯಾಗಲಿದೆ ಎಂದರು.

2014-15ನೇ ಸಾಲಿನ ಕನಿಷ್ಠ ಬೆಂಬಲ ಬೆಲೆಗೆ ಹೋಲಿಸಿದರೆ 2022-23ನೇ ಸಾಲಿಗಾಗಿ ಘೋಷಿಸಿರುವ ಬೆಂಬಲ ಬೆಲೆ ಶೇಕಡ 47 ರಿಂದ ಶೇಕಡ 131ರಷ್ಟು ಹೆಚ್ಚಳವಾಗಿದೆ ಎಂದು ಸಚಿವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version