ದಿನದ ಸುದ್ದಿ

ದೀಪಾವಳಿ ಹಬ್ಬ | ಹೆಚ್ಚುವರಿ 2 ಸಾವಿರ ವಿಶೇಷ ಬಸ್ ಗಳ ಸಂಚಾರ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2 ಸಾವಿರ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಇದೇ 30 ರಿಂದ ನವೆಂಬರ್ 1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೆಚ್ಚುವರಿ ವಾಹನಗಳು ಸಂಚಾರ ಪ್ರಾರಂಭಿಸಲಿವೆ.

ತಮಿಳುನಾಡು ಹಾಗೂ ಕೇರಳ ಕಡೆಗೆ ತೆರಳುವ ಬಸ್‌ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಪ್ರಯಾಣಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೇ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ 4 ರಂದು ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುವುದು.

www.ksrtc.karnataka.gov.in ವೆಬ್‌ಸೈಟ್ ಮುಖಾಂತರ ಇ-ಟಿಕೆಟ್ ಬುಕ್ಕಿಂಗ್‌ಅನ್ನು ಮಾಡಬಹುದಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಇದಲ್ಲದೇ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version