ದಿನದ ಸುದ್ದಿ
ದೀಪಾವಳಿಗೆ ಏಳು ಸಾವಿರ ವಿಶೇಷ ರೈಲುಗಳ ಓಡಾಟ
ಸುದ್ದಿದಿನಡೆಸ್ಕ್:ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಬಂಪರ್ ದೀಪಾವಳಿ ಆಫರ್ ನೀಡಿದೆ.
ಪ್ರತಿದಿನ ಎರಡು ಲಕ್ಷ ಹೆಚ್ಚುವರಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೇ ಈ ವರ್ಷ ದೀಪಾವಳಿ ಮತ್ತು ಛತ್ ಪೂಜೆಗೆ 7,000 ವಿಶೇಷ ರೈಲುಗಳನ್ನು ಓಡಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರೈಲ್ವೇ ಅಧಿಕಾರಿಗಳ ಪ್ರಕಾರ, ಕಳೆದ ವರ್ಷ ದೀಪಾವಳಿ ಮತ್ತು ಛಾತ್ ಪೂಜೆ ಸಂದರ್ಭದಲ್ಲಿ 4,500 ವಿಶೇಷ ರೈಲುಗಳನ್ನು ಓಡಿಸಲಾಗಿತ್ತು. ಈ ಬಾರಿಯೂ ಪ್ರಯಾಣಿಕರು ಹೆಚ್ಚಾಗುವ ನಿಟ್ಟಿನಲ್ಲಿ 7 ಸಾವಿರ ರೈಲುಗಳನ್ನು ಓಡಿಸಲು ಮುಂದಾಗಿದೆ.
ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರು ಹೆಚ್ಚು ರೈಲಿನಲ್ಲಿ ಓಡಾಡುತ್ತಾರೆ. ಈಗಾಗಲೇ ಉತ್ತರ ರೈಲ್ವೆ ಗಣನೀಯ ಸಂಖ್ಯೆಯ ರೈಲುಗಳನ್ನು ನಿರ್ವಹಿಸುತ್ತದೆ. ಉತ್ತರ ರೈಲ್ವೆ ಇಲಾಖೆಯ ಇತ್ತೀಚಿನ ಪತ್ರಿಕಾ ಹೇಳಿಕೆ ಪ್ರಕಾರ, ಜನರು ತಮ್ಮ ಗಮ್ಯಸ್ಥಾನಗಳನ್ನು ತಲುಪಲು ಸಹಾಯ ಮಾಡಲು ಸುಮಾರು 3,050 ವಿಶೇಷ ರೈಲುಗಳ ಉಪಯೋಗವನ್ನು ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
2023ರಲ್ಲಿ, ಭಾರತೀಯ ರೈಲ್ವೇ ವಿಶೇಷ ರೈಲು ಉತ್ಸವವನ್ನು ನಡೆಸಿತ್ತು. ಈ ಬಾರಿ ಇದಕ್ಕೆ ಅನುಗುಣವಾಗಿ ಉತ್ತರ ರೈಲ್ವೆ 1,082 ವಿಶೇಷ ರೈಲು ಓಡಿಸುವ ಮೂಲಕ ದೇಶದಲ್ಲಿ ಒಟ್ಟು 3,050 ರೈಲ್ವೆಗಳು ಓಡಾಟ ನಡೆಸಿದೆ. ಇದೀಗ ಇದು ಇದು ಶೇಕಡಾ 181 ರಷ್ಟು ಹೆಚ್ಚಳವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


