ದಿನದ ಸುದ್ದಿ
ಅ.31 ರೊಳಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ಪಟಾಕಿ ಅಂಗಡಿ ತೆರೆಯಲು ಅನುಮತಿ : ಎಸ್ ಪಿ ಹನುಮಂತರಾಯ
ಸುದ್ದಿದಿನ, ದಾವಣಗೆರೆ:ಸರ್ಕಾರ ಹಬ್ಬಗಳ ಆಚರಣೆ ಕುರಿತಂತೆ ನಿರ್ದೇಶನಗಳನ್ನು ನೀಡಿದೆ. ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಲೇಬೇಕು. ಕೋವಿಡ್ ನಿಯಂತ್ರಣ ನಮ್ಮ ಕರ್ತವ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಹೇಳಿದರು.
ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ದಸರಾ, ದೀಪಾವಳಿ ಮತ್ತು ಈದ್ ಮಿಲಾದ್ ಆಚರಣೆ ಕುರಿತ ನಾಗರೀಕ ಶಾಂತಿ ಸೌಹಾರ್ಧ ಸಭೆಯಲ್ಲಿ ಅವರು ಮಾತನಾಡಿದರು.
ಅಕೋಬರ್ 31 ರೊಳಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಅನುಮತಿ ನೀಡಲಾಗುವುದು. ಇದಕ್ಕೆ ನವೆಂಬರ್ 10 ರಿಂದ 17 ರ ತನಕ ಪರವಾನಿಗೆ ನೀಡಲಾಗುವುದು. ಅರ್ಜಿಗಳನ್ನು ಆಧರಿಸಿ ಅದರ ಆಧಾರದ ಮೇಲೆ ಜಾಗ ನೀಡಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243