Connect with us

ದಿನದ ಸುದ್ದಿ

ಸಚಿವ ಡಾ.ಸುಧಾಕರ್ ವಿರುದ್ದ ಮಾನನಷ್ಟ ಮೊಕದ್ದಮೆ : ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು: ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ ಜೊತೆ ಈ ಆರೋಪದ ಬಗ್ಗೆಯೂ ಹೈಕೋರ್ಟ್ ಹಾಲಿ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸತ್ಯಸಂಗತಿಯನ್ನು ಬಹಿರಂಗ ಪಡಿಸಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ಇದನ್ನೂ ಓದಿ |ಪಕ್ಷಿ ಪರಿಚಯ | ಹದ್ದು

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾನೂನಿನ ಹೋರಾಟದ ಮೂಲಕ ಈ ಪ್ರಕರಣವನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ. ಇಂತಹ ನಿಂದನಾತ್ಮಕ ಹೇಳಿಕೆ ನೀಡಿರುವ ಸಚಿವ ಡಾ.ಸುಧಾಕರ್ ವಿರುದ್ದ ಪ್ರತ್ಯೇಕವಾಗಿ ಮಾನನಷ್ಟ ಮೊಕದ್ದಮೆ ಹಾಕಬೇಕು ಎಂದು ಕೆಲವು ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯದೆ ನಾವು ಬಿಡುವುದಿಲ್ಲ.ಸುಧಾಕರ್ ಒಬ್ಬ ಸಾಮಾನ್ಯ ವ್ಯಕ್ತಿ ಅಲ್ಲ, ಅವರೊಬ್ಬ ಜನಪ್ರತಿನಿಧಿ ಮತ್ತು ಸಚಿವ. ಇಂತಹವರು ನಾಲಿಗೆ ಸಡಿಲು ಬಿಟ್ಟು ಬೇರೆ ಜನಪ್ರತಿನಿಧಿಗಳನ್ನು ನಿಂದಿಸಿರುವುದು ಸ್ಪಷ್ಟವಾಗಿ ಸದಸ್ಯರ ವಿಶೇಷ ರಕ್ಷಣೆಯ (Privilage) ಉಲ್ಲಂಘಣೆಯಾಗಿದೆ. ಸುಧಾಕರ್ ಸ್ಥಿತಿ ತಾ ಕಳ್ಳ ಇತರರನ್ನು ನಂಬ ಎಂಬಂತಾಗಿದೆ.

ಪುರುಷಪ್ರಧಾನ ಸಮಾಜದಲ್ಲಿ ಪುರುಷ ಶಾಸಕರು ಇಂತಹ ಆರೋಪಗಳನ್ನು ಸುಲಭವಾಗಿ ಜೀರ್ಣಿಸಿಕೊಳ್ಳಬಲ್ಲರು. ಆದರೆ ಮಹಿಳಾ ಶಾಸಕರಿಗೆ ಇಂತಹ ಸುಳ್ಳು ಆರೋಪಗಳು ಬಹಳ ಹಾನಿ ಉಂಟುಮಾಡುತ್ತದೆ. ಅವರು ಮನೆಯಲ್ಲಿ ಕುಟುಂಬದವರನ್ನು ಹೇಗೆ ಎದುರಿಸಬೇಕು? ಇಂತಹ ಕೀಳು ಮನಸ್ಸಿನ ಪುರುಷ ರಾಜಕಾರಣಿಗಳ ಕಾರಣದಿಂದಾಗಿಯೇ ರಾಜಕೀಯ ಪ್ರವೇಶಕ್ಕೆ ಮಹಿಳೆಯರು ಹಿಂದೇಟು ಹಾಕುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಫ್ರಾನ್ಸ್‌ನಲ್ಲಿ ನಡೆದಿರುವ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಭಾರತದ ಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ, ಗ್ರಾಂಡ್ ಪ್ರಿಕ್ಸ್, ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಇಬ್ಬರು ನರ್ಸ್‌ಗಳ ಜೀವನ ಸುತ್ತಲಿನ ಕಥಾವಸ್ತು ಹೊಂದಿರುವ ’ಆಲ್ ವಿ ಇಮ್ಯಾಜಿನ್ ಆಜ್ ಲೈಟ್’ ಚಿತ್ರ ಪಾಮೆ ಡೋರ್ ವರ್ಗದಲ್ಲಿ ನಾಮನಿರ್ದೇಶಿತಗೊಂಡಿದ್ದು, ಈ ವರ್ಗದ 2ನೇ ಸ್ಥಾನವಾದ ಗ್ರಾಂಡ್ ಪ್ರಿಕ್ಸ್‌ಗೆ ಪಾತ್ರವಾಯಿತು.

ಇದರೊಂದಿಗೆ ಭಾರತ ಈ ಉತ್ಸವದಲ್ಲಿ ಚಿತ್ರ ನಿರ್ಮಾಣಕ್ಕಾಗಿ 2, ನಟನೆಗಾಗಿ 1, ಹಾಗೂ ಛಾಯಾಗ್ರಹಣಕ್ಕಾಗಿ 1ಹೀಗೆ ಒಟ್ಟು 4 ಗೌರವಗಳನ್ನು ಪಡೆದಂತಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಸಾಧನೆಗಾಗಿ ಪಾಯಲ್ ಕಪಾಡಿಯಾ ಅವರನ್ನು ಅಭಿನಂದಿಸಿದ್ದಾರೆ.

ಎಫ್‌ಟಿಐಐನ ಹಳೆಯ ವಿದ್ಯಾರ್ಥಿ ಪಾಯಲ್ ಕಪಾಡಿಯಾ ಅವರ ವಿಶೇಷವಾದ ಕೌಶಲ್ಯ ಭಾರತೀಯ ಹೊಸ ತಲೆಮಾರಿನ ನಿರ್ಮಾಪಕರಿಗೆ ಸ್ಫೂರ್ತಿಯಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ

Published

on

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ ಚುನಾವಣೆ ಪ್ರಯುಕ್ತ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆಯನ್ನು ಬೆಂಗಳೂರಿನ ಜೆಪಿ ಭವನದಲ್ಲಿಂದು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಆರ್. ಅಶೋಕ, ಮಾಜಿ ಸಚಿವರಾದ ಕೆ.ಗೋಪಾಲಯ್ಯ, ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಸಿ.ಪಿ.ಯೋಗೇಶ್ವರ್ ಮಾತನಾಡಿದರು.

ಇನ್ನೊಂದೆಡೆ, ಚಿತ್ರದುರ್ಗದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ವಿಧಾನಪರಿಷತ್ ಸದಸ್ಯ ಪುಟಣ್ಣಯ್ಯ ಮತಯಾಚಿಸಿದರು. ಇದೇ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಪಿಂಚಣಿ ವ್ಯವಸ್ಥೆ ಬದಲಾವಣೆಗೆ ಸರಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending