ದಿನದ ಸುದ್ದಿ
ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಅಪಮಾನಕರ ಹೇಳಿಕೆ ; ಕೇಂದ್ರ ಸಚಿವ ನಾರಾಯಣ ರಾಣೆ ಬಂಧಿಸದಂತೆ ಬಾಂಬೆ ಹೈಕೋರ್ಟ್ ತಡೆಯಾಜ್ಞೆ
ಸುದ್ದಿದಿನ, ಮಹಾರಾಷ್ಟ್ರ : ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಇನ್ನೂ ಎರಡು ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಬಿ. ವಾರಳೆ ಮತ್ತು ಎಸ್.ಎಂ. ಮೋದಕ್ ಅವರನ್ನೊಳಗೊಂಡಿ ವಿಭಾಗೀಯ ಪೀಠ, ಉದ್ಧವ್ ಠಾಕ್ರೆ ವಿರುದ್ಧ ಅಪಮಾನಕರ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದ ಅರ್ಜಿಯ ವಿಚಾರಣೆ ನಡೆಸಿತು.
ಕಳೆದ ವರ್ಷದ ಆಗಸ್ಟ್ 23ರಂದು ರಾಯ್ಗಢ್ ಜಿಲ್ಲೆಯಲ್ಲಿ ನಡೆದ ಬಿಜೆಪಿಯ ಜನಾಶೀರ್ವಾದ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ್ದ ರಾಣೆ, ಉದ್ಧವ್ ಠಾಕ್ರೆ ವಿರುದ್ಧ ಅಪಮಾನಕರ ಹೇಳಿಕೆಯನ್ನು ನೀಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243