Connect with us

ದಿನದ ಸುದ್ದಿ

ಪದವಿ, ಸ್ನಾತಕೋತ್ತರ ಕೋರ್ಸ್ | ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಇದೇ ರೀತಿಯಲ್ಲಿ, ಸ್ನಾತಕೋತ್ತರ ಕೋರ್ಸುಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ.

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿ ಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ಪ್ರತೀ ಸೆಮಿಸ್ಟರುಗಳ ಆರಂಭ, ದಂಡರಹಿತ ಮತ್ತು ದಂಡ ಸಹಿತ ಪ್ರವೇಶಾತಿ ಅವಧಿ, ಪ್ರತಿ ಸೆಮಿಸ್ಟರುಗಳಿಗೆ ಬೋಧನಾ ತರಗತಿಗಳು ಆರಂಭವಾಗುವ ಮತ್ತು ಮುಗಿಯುವ ದಿನ, ಪರೀಕ್ಷೆ ಆರಂಭವಾಗುವ ದಿನ, ಮೌಲ್ಯಮಾಪನ ಆರಂಭ ಮತ್ತು ಫಲಿತಾಂಶ ಪ್ರಕಟಣೆಯ ದಿನ, ರಜೆ ಆರಂಭದ ದಿನಗಳನ್ನೆಲ್ಲ ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಪಟ್ಟಿಯಲ್ಲಿ ಪದವಿಯ 6, ಸ್ನಾತಕೋತ್ತರ ಮಟ್ಟದ 4 ಮತ್ತು ವೃತ್ತಿಪರ ಕೋರ್ಸುಗಳ 8 ಸೆಮಿಸ್ಟರುಗಳನ್ನೂ ಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಸ್ಟರ್ ಮುಗಿದ ನಂತರದ ರಜೆ ಅವಧಿಯಲ್ಲಿ ಪರೀಕ್ಷಾ ಕರ್ತವ್ಯ ಬಂದರೆ, ಉಪನ್ಯಾಸಕರು ಆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಪರಿಷತ್ ಮುಖ್ಯಸ್ಥರಾದ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಇದೇ 7ರಂದು ಎಲ್ಲಾ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ಸ್ ಜತೆ ವರ್ಚುಯಲ್ ಸಭೆ ನಡೆಸಿ, ಸಮಾಲೋಚನೆ ನಡೆಸಲಾಗಿತ್ತು ಎಂದು ಸಚಿವರು ವಿವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending