ರಾಜಕೀಯ
ಮೇಕೆದಾಟು ಯೋಜನೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ : ಎಚ್.ಡಿ.ಕೆ
ಸುದ್ದಿದಿನ,ನವದೆಹಲಿ : ಮೇಕೆದಾಟು ಯೋಜನೆ ಬಗ್ಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರಿಂದ ಯಾವ ಕ್ಷಣದಲ್ಲಾದರೂ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಪಡೆಯಬಹುದು. ಕೇಂದ್ರ ಸರ್ಕಾರಕ್ಕೆ ಎಲ್ಲಾ ರೀತಿಯ ಮಾಹಿತಿಗಳನ್ನು ನೀಡಿದ್ದೇವೆ ಎಂದು ದೆಹಲಿಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭೇಟಿ ಬಳಿಕ ಮಾತನಾಡಿದರು.
ಹೆದ್ದಾರಿಗಳ ಕಾಮಗಾರಿ ಉದ್ಘಾಟನೆಗೆ ಆಗಮಿಸುವಂತೆ ಮನವಿ ಮಾಡಿ್ದದ ನಿಯೋಗವು
ಮೂರು ಸಾವಿರ ಕೋಟಿ ಪರಿಹಾರ ನೀಡುವಂತೆ ಕೇಳಿತು.ನಂತರ ರಾಜನಾಥ್ ಸಿಂಗ್ ಭೇಟಿಯಾದ ರಾಜ್ಯದ ನಿಯೋಗವು, ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಭೇಟಿಯಾಯಿತು. ಹೆದ್ದಾರಿಗಳ ಕಾಮಗಾರಿ ಉದ್ಘಾಟನೆಗೆ ಆಗಮಿಸುವಂತೆ ಮನವಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401