ದಿನದ ಸುದ್ದಿ

ದೆಹಲಿ ಅಗ್ನಿ ಅವಘಡ; 27 ಜನರ ಸಾವು, ಮೃತಪಟ್ಟ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ : ಪ್ರಧಾನಿ ಮೋದಿ

Published

on

ಸುದ್ದಿದಿನ,ದೆಹಲಿ : ದೆಹಲಿ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 27 ಜನರು ಸಾವಿಗೀಡಾಗಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಈ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ದೆಹಲಿಯ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ಅತೀವ ಬೇಸರವಾಗಿದೆ. ದುಃಖಿತ ಕುಟುಂಬಗಳ ಜತೆ ನಾವಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ’ ಎಂಬುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ. ಅಲ್ಲದೆ,

ಪ್ರಧಾನಿ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೊ ನಿಲ್ದಾಣ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಸಂಜೆ ಸಂಭವಿಸಿದ ದುರಂತದಲ್ಲಿ 27ಮಂದಿ ಮೃತಪಟ್ಟಿದ್ದು,50ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version