Connect with us

ದಿನದ ಸುದ್ದಿ

ಅಥಿತಿ ಉಪನ್ಯಾಸಕರ ಬೇಡಿಕೆಗಳು ; ವರದಿ ನಂತರ ಕ್ರಮ : ಸಚಿವ ಡಾ.ಅಶ್ವಥನಾರಾಯಣ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಳಗಾವಿ : ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಒಂದು ತಿಂಗಳೊಳಗಾಗಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ, ಜೈವಿಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಡಾ.ಅಶ್ವಥನಾರಾಯಣ ಅವರು ಅಧಿವೇಶನದಲ್ಲಿ ತಿಳಿಸಿದರು.

ಶುಕ್ರವಾರ ವಿಧಾನ ಸಭೆಯ ಶೂನ್ಯ ವೇಳೆಯಲ್ಲಿ ದೆಹಲಿ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರೆ ಕಾಲಿಕ ಉಪನ್ಯಾಸಕರ ಖಾಯಂ ಮಾಡುವ ಹಾಗೂ ವೇತನ ಹೆಚ್ಚಳ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 430 ಸರ್ಕಾರಿ ಪದವಿ ಕಾಲೇಜಿನಲ್ಲಿ 14564 ಜನ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಈ ಉಪನ್ಯಾಸಕರನ್ನು ಕಾರ್ಯಭಾರ ಆಧರಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆದಾಗ್ಯೂ ಅತಿಥಿ ಉಪನ್ಯಾಸಕರ ಬಗ್ಗೆ ಸರ್ಕಾರ ಸಹಾನುಭೂತಿಯಿಂದ ಇದೆ. ಅವರ ಬೇಡಿಕೆ, ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಈಗಾಗಲೇ ಸರ್ಕಾರ ಮಾಡಿದೆ. ಮುಖ್ಯಮಂತ್ರಿಗಳು ಈಗಾಗಲೇ ದಿನಾಂಕ 15 12-2021 ರಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾನೂನು ಇಲಾಖೆ, ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ‌ ಎಂದು ಮಾಹಿತಿ ತಿಳಿಸಿದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆ ಕಾಲಿಕ ಉಪನ್ಯಾಸಕರನ್ನು ಖಾಯಂ ಮಾಡುವ ಕುರಿತಂತೆ ಸರ್ಕಾರ ಈಗಾಗಲೇ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಿದ್ದು, ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending