ದಿನದ ಸುದ್ದಿ

ಸಮಾಜ ಕಲ್ಯಾಣ ಇಲಾಖೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಮಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ನವೀನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮದಡಿ ನವೀನ
ಮತ್ತು ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಕೋರಿ ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆ. 15 ರಿಂದ ಮಾ. 15 ರವರೆಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ತಂತ್ರಾಂಶದಲ್ಲಿ (SSP) ಅವಕಾಶ ನೀಡಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇದರ ಸದಾವಕಾಶವನ್ನು ಪಡೆಯಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್ ರೇಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version