ದಿನದ ಸುದ್ದಿ

ಕೂಡ್ಲಿಗಿ ದೇವದಾಸಿ ಸ್ವಾಲಂಬನಾ ಕೇಂದ್ರಕ್ಕೆ ಅಭಿನಂದಿಸಿದ ಜಿಲ್ಲಾಧಿಕಾರಿ

Published

on

ಸುದ್ದಿದಿನ,ಬಳ್ಳಾರಿ : ಚಿಕ್ಕಿ ಘಟಕದಿಂದ ಬದುಕು ಕಟ್ಟಿಕೊಂಡಿದ್ದ ಮಾಜಿ ದೇವದಾಸಿಯರ ಕೂಡ್ಲಿಗಿ ದೇವದಾಸಿ ಸ್ವಾಲಂಬನಾ ಕೇಂದ್ರದ ಅಧ್ಯಕ್ಷೆ ವೆಂಕಮ್ಮ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಸ್ವಾವಲಂಬನೆ ಬದುಕುರೂಪಿಸಿಕೊಂಡು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗುವುದರ ಮೂಲಕ ಗಮನಸೆಳೆದಿದ್ದ ಕೇಂದ್ರದ ಅಧ್ಯಕ್ಷೆ ವೆಂಕಮ್ಮ ಹಾಗೂ ಪದಾಧಿಕಾರಿಗಳನ್ನು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಮ್ಮ ಕಚೇರಿಗೆ ಸೋಮವಾರ ಕರೆಯಿಸಿ ಅವರನ್ನು ಅಭಿನಂದಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ, ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ನಾಗವೇಣಿ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version