Connect with us

ಬಹಿರಂಗ

ಬೇಕಾದುದು- ವೈಷ್ಣವ ದೀಕ್ಷೆಯಲ್ಲ ; ತ್ರಿಜ ದೀಕ್ಷೆ

Published

on

  • ದೇವನೂರ ಮಹಾದೇವ

ಮಧ್ವ ಸಿದ್ಧಾಂತದ ಬಗ್ಗೆ ಕುವೆಂಪು ಅಸಹನೆಯನ್ನು* ಮನುಷ್ಯರಾದರೆ ಸಾಕು ಅರ್ಥ ಮಾಡಿಕೊಳ್ಳಬಹುದು. ಮಧ್ವ ಸಿದ್ಧಾಂತದ ನಿತ್ಯ ಮುಕ್ತ, ನಿತ್ಯ ಸಂಸಾರಿ, ನಿತ್ಯ ನಾರಕಿ- ಎಂಬ ಈ ದೃಷ್ಟಿಕೋನದಲ್ಲಿ -ಜಗತ್ತು, ಮನುಷ್ಯ ಬದಲಾಗುವುದಿಲ್ಲ ಎಲ್ಲವೂ ನಿತ್ಯ ಅಂದರೆ ಶಾಶ್ವತ ಎಂದು ಸಮಾಜವನ್ನು ಜಡಗೊಳಿಸಿ ಚಲನರಹಿತ ಮಾಡಿ, ನರಕವನ್ನೇ ತಾರತಮ್ಯವನ್ನೇ ಸಿದ್ಧಾಂತಗೊಳಿಸಿಬಿಟ್ಟಿದೆ.

ಇಂಥ ಕಡೆ ವಿಶ್ವೇಶ್ವರತೀರ್ಥರು ಹುಟ್ಟಿದ್ದಾರೆ. ಈ ಸಿದ್ಧಾಂತದ ಮಠಕ್ಕೆ ಶ್ರೀಗಳಾಗಿದ್ದಾರೆ. ಆದರೆ ಚಲನೆಯನ್ನು ಬಯಸುವಂತೆ ಕಾಣುತ್ತಾರೆ. ಹಾಗಾಗಿ, ತನ್ನ ಸಿದ್ಧಾಂತದ ಚೌಕಟ್ಟನ್ನು ಮೀರಲು ಇವರು ಒದ್ದಾಡುತ್ತಿರುವಂತೆ ಕಾಣಿಸುತ್ತಿದೆ. ಈ ಒದ್ದಾಟ, ಬಲೆಗೆ ಸಿಕ್ಕಿಕೊಂಡು ಕೈಕಾಲು ಬಡಿಯುತ್ತಿರುವ ಒಂದು ಗುಬ್ಬಚ್ಚಿಯ ಒದ್ದಾಟದಂತಿದೆ. ಇದನ್ನು ನೋಡಿದಾಗ ಇವರು ಅಲ್ಲಿರಬೇಕಾದವರಲ್ಲ, ನಮ್ಮ ಜೊತೆ ಇರಬೇಕಾದವರು ಅಂತ ಒಂದೊಂದು ಸಲ ಅನ್ನಿಸುತ್ತದೆ.

ಆದರೆ ಇವರ ಒದ್ದಾಟವು ಆಳವಾದ ಧಾರ್ಮಿಕತೆಯಿಂದ ಬಂದುದೇ? ಅಂತರಂಗದ್ದೇ? ಎಂದು ಪ್ರಶ್ನಿಸಿಕೊಂಡಾಗ-ಧೈರ್ಯವಾಗಿ ಹೌದು ಎಂದು ಹೇಳಲು ಕಷ್ಟವಾಗುತ್ತದೆ. ‘ಕೀಳಿಂಗಲ್ಲದೆ ಹಯನು ಕರೆಯದು’ ಎಂದರೆ, ತಾನು ತನ್ನ ಅಹಂ ಅನ್ನು ಅಲ್ಪವಾಗಿಸದೆ ಮೋಕ್ಷವಿಲ್ಲ- ಎಂಬ ತುಡಿತದಿಂದಾಗಿ ಅಹಂ ಅಲ್ಪವಿರುವ, ಮೇಲರಿಮೆ ಇಲ್ಲದ ಅಸ್ಪೃಶ್ಯ ಸಮುದಾಯವನ್ನು ಶ್ರೇಷ್ಠವೆಂದು ಭಾವಿಸಿದ ವಚನಕಾರರ ನಡೆ ಕಂಡಾಗ, ಶ್ರೀಪೇಜಾವರರ ಪಾದಯಾತ್ರೆ ಧಾರ್ಮಿಕವಲ್ಲವೇನೋ ಧರ್ಮರಾಜಕಾರಣವಿರಬೇಕು ಎಂಬ ಅನುಮಾನ ಹುಟ್ಟಿಸುತ್ತದೆ. ‘ತಮ್ಮ ಮಠಕ್ಕೆ ಉತ್ತರಾಧಿಕಾರಿಯಾಗಿ ಕುರುಬರನ್ನೇನಾದರೂ ಮಾಡುತ್ತೀರಾ’ ಎಂದು ಕೇಳಿದರೆ, ‘ಬ್ರಾಹ್ಮಣರನ್ನು ಮಾತ್ರ ಕೇಳುತ್ತೀರಿ? ಕ್ರಿಶ್ಚಿಯನ್ನರನ್ನು ಕೇಳುತ್ತೀರಾ? ಲಾಮಾ ಮಾಡು ಎಂದು ಬೌದ್ಧರನ್ನು ಕೇಳುತ್ತೀರಾ?’ ಎಂದು ಪೇಜಾವರರು ಸಹನೆ ಕಳೆದು ಕೊಳ್ಳುತ್ತಾರೆ!.

‘ನಾನು ಕ್ರಿಶ್ಚಿಯನ್, ನಾನು ಬೌದ್ಧ, ನಾನು ಯಾಕೆ ಮಠಾಧಿಪತಿಯಾಗಬಾರದು?’ ಎಂದು ಆ ಧರ್ಮಗಳಲ್ಲಿರುವ ಯಾರೇ ಪ್ರಶ್ನಿಸಬಹುದು. ಇದಕ್ಕೆ ಆ ಧರ್ಮಗಳಲ್ಲಿ ಅವಕಾಶವಾದರೂ ಇದೆ. ಕೆಲವು ಕಡೆ ಸಾಧ್ಯವೂ ಆಗಿದೆ. ಹಿಂದೂ ಎಂದುಕೊಂಡಿರುವ ಜಾತಿಧರ್ಮದಲ್ಲಿ ಇದು ಸಾಧ್ಯವೇ? ಉಡುಪಿ ಕೃಷ್ಣನ ಗುಡಿಯ ಹೊರಗೆ ನಿಂತಿರುವ ಕನಕದಾಸನ ಕುರುಬರು ನಿಮ್ಮ ಸಮಾಜಕ್ಕೆ ಸೇರಿಲ್ಲವೇ? ಅವರ ಧರ್ಮವೇ ಬೇರೆಯೇ? ಅಥವಾ ಪ್ರತಿ ಜಾತಿಯೂ ಒಂದೊಂದು ಧರ್ಮವೇ?

ಹಾಗಾದರೆ ಧರ್ಮ ಎಂದರೇನು? ಜಾತಿಗಳ ಮೇಲು-ಕೀಳು ನಿಷಿದ್ಧಗಳ ಕಟ್ಟಳೆಗಳೇ ಇಲ್ಲಿ ಧರ್ಮವಾಗಿದೆ. ಅದಕ್ಕೇ ಪೇಜಾವರರನ್ನು ತಿರುಪತಿಯಲ್ಲಿ ಪೂಜೆಗೆ ಬಿಡುವುದಿಲ್ಲ ಎಂದರೆ- ನಾವೆಂಥ ಕ್ಷುದ್ರಜೀವಿಗಳು ಎಂದು ನಮಗನಿಸುವುದಿಲ್ಲ. ಈ ನಮ್ಮ ಮಠ, ದೇವಸ್ಥಾನ, ಪೂಜಾಸ್ಥಳಗಳು ಈ ಅಂಧಃತಮಸ್ಸಿನಿಂದ ಹೊರಬರಲು ಇನ್ನೆಷ್ಟ್ಟು ವರ್ಷಗಳು ಕಾಯಬೇಕು? ‘ನಿನ್ನನ್ನು ನನ್ನ ಮಠದ ಉತ್ತರಾಧಿಕಾರಿಯನ್ನಾಗಿ ಮಾಡುತ್ತೇನೆ, ಮತಾಂತರ ಆಗಬೇಡ’ ಎನ್ನಲು ಬಾಯಿಬಾರದ ಮಠಾಧಿಪತಿ ‘ಮತಾಂತರ ಆಗಬಾರದು’ ಎಂದು ನೈತಿಕತೆ ಕಾಡದೆ ಹೇಳಿದರೂ ಅದರೊಳಗಿನ ನಿರ್ಲಜ್ಜತೆ ನಮಗೆ ಕಾಣಿಸುವುದಿಲ್ಲ. ‘ನೀನು ಹೊರಗಿರುವುದೇ ನಮ್ಮ ಸಂಪ್ರದಾಯ’ ಎನ್ನುವುದರ ಕ್ರೌರ್ಯವೂ ನಮಗೆ ತಟ್ಟುವುದಿಲ್ಲ.

ಈಗ ಪೇಜಾವರ ಶ್ರೀಗಳು ದಲಿತರಿಗೆ ವೈಷ್ಣವ ದೀಕ್ಷೆ ಕೊಡಲು ಹೊರಟಿದ್ದಾರೆ. ಈಗಾಗಲೇ ವೈಷ್ಣವ ದೀಕ್ಷೆ ಪಡೆದ ಅನೇಕ ದಲಿತ ದಾಸ ಒಕ್ಕಲುಗಳು ಇವೆ. ಶಂಖ-ಜಾಗಟೆಯನ್ನು ಪ್ರತ್ಯೇಕವಾಗಿ ಮಡಿಯಾಗಿ ಇಟ್ಟುಕೊಂಡು, ಆ ಇಟ್ಟಿರುವ ಜಾಗಕ್ಕೆ ಉಳಿದವರಿಗೆ ಪ್ರವೇಶ ಕೊಡದೆ, ದಾಸ ಒಕ್ಕಲುಗಳಲ್ಲೇ ಮದುವೆಗೆ ಹೆಣ್ಣು ಗಂಡು ಹುಡುಕುತ್ತಿವೆ. ಈ ದೀಕ್ಷೆ ದಲಿತರಲ್ಲಿ ಭೇದವನ್ನು ಹೆಚ್ಚಿಸಿರುವುದೇ ಹೊರತು ಐಕ್ಯತೆಯನ್ನಲ್ಲ. ಪೇಜಾವರ ಶ್ರೀಗಳ ಪಾದಯಾತ್ರೆಯಿಂದ ದಲಿತರಲ್ಲಿ ಇನ್ನಷ್ಟು ದಾಸರು ಹೆಚ್ಚಾಗಬಹುದು. ಶಂಖಜಾಗಟೆ ಬಾರಿಸಬಹುದು! ಎಷ್ಟೇ ಶಂಖ-ಜಾಗಟೆ ಬಾರಿಸಿದರೂ ಅವರ ಅಸ್ಪೃಶ್ಯ ಸ್ಥಿತಿಯಿಂದ ಚಲನೆ ಕಾಣದು. ಯಾಕೆಂದರೆ ವೈಷ್ಣವ ದೀಕ್ಷೆ ಎಂದರೆ ಸೇವಕತನದ ದಾಸ ದೀಕ್ಷೆ.

ಹೀಗಿರುವಾಗ ಶ್ರೀ ಪೇಜಾವರರು ವೈಷ್ಣವದೀಕ್ಷೆಯನ್ನು ಪುನರ್‍ಪರಿಶೀಲಿಸುವುದು ಒಳಿತೇನೋ. ಬದಲಾಗಿ ದ್ವಿಜರಿಗೆ ತ್ರಿಜ ದೀಕ್ಷೆ ಕೊಡುವುದು ನಮ್ಮ ಸಮಾಜದ ಆರೋಗ್ಯ ಐಕ್ಯತೆ ಸಮತೋಲನಕ್ಕೆ ಅಗತ್ಯವೇನೋ ಅನ್ನಿಸುತ್ತದೆ. ಹಾಲಿ ದ್ವಿಜ ದೀಕ್ಷೆಯ ಗಾಯತ್ರೀ ಮಂತ್ರದಲ್ಲಿ, ಮುಖ್ಯವಾಗಿ ಬುದ್ಧಿ ಪ್ರಚೋದನೆಯಾಗಲಿ ಎಂಬ ಆಶಯವಿದೆ. ಬುದ್ಧಿಯಿಂದ ಒಡಕು ವಂಚನೆ ಮೇಲರಿಮೆ ಕೀಳರಿಮೆ ಇತ್ಯಾದಿಗಳು ಹೆಚ್ಚಲೂಬಹುದು. ಭಾರತದ ಸಮಾಜಕ್ಕೆ ಇಂದು ತುರ್ತಾಗಿ ಬೇಕಾಗಿರುವುದು- ಕರುಳು ಅಂದರೆ ಅಂತಃಕರಣ, ಅಂದರೆ ಬಂಧುತ್ವ. ಇದರ ಪ್ರಚೋದನೆಗಾಗಿ, ಅಂದರೆ ಕಾರುಣ್ಯದ ಪ್ರಚೋದನೆಯಾಗಲಿ ಎಂಬ ಆಶಯದ ತ್ರಿಜದೀಕ್ಷೆ ಅಂದರೆ ನೆತ್ತಿಗೊಂದು ಮುತ್ತು ಕೊಟ್ಟು ಮಗುತನದ ಬಂಧುತ್ವದ ಅಭೇದದೀಕ್ಷೆ ಭಾರತಕ್ಕೆ ಅರ್ಜೆಂಟಾಗಿ ಬೇಕಾಗಿದೆ.

ಭಾರತವು ಏನೇನೋ ಹುಟ್ಟುಹಾಕಿದೆ. ಹುಟ್ಟಿಸುವುದರಲ್ಲಿ ನಾವು ನಿಸ್ಸೀಮರು. ಚಾತುರ್ವರ್ಣ ಜಾತಿಭೇದದ ತಾರತಮ್ಯದ ಕಾನೂನು ಕಟ್ಟಳೆಗಳನ್ನು ಧರ್ಮವಾಗಿಸಲು ದೇವರುಗಳನ್ನೇ ರೌಡಿಗಳನ್ನಾಗಿಸಿದ ದೇಶ ಇದು. ಇತ್ತೀಚೆಗೆ ಆಕ್ಸಿಡೆಂಟ್ ಗಣೇಶನನ್ನೂ ಹುಟ್ಟುಹಾಕಿದೆ. ಈಗ ಒಂದು ಹೊಸ ಹುಟ್ಟಿಗಾಗಿ ಪೇಜಾವರ ಶ್ರೀಗಳ ಮುಂದೆ ಸಲಹೆಯೊಂದನ್ನಿಡುವೆ. ನಮ್ಮದು ಜನ್ಮಾಂತರಗಳನ್ನು ನಂಬುವ ದೇಶ. ಈ ಜನ್ಮದ ತರ್ಕಕ್ಕೆ- ‘ಕಳೆದ ಜನ್ಮದಲ್ಲಿ ಅಸ್ಪೃಶ್ಯತೆ ಆಚರಿಸಿದವರೇ ಈ ಜನ್ಮದಲ್ಲಿ ಅದನ್ನು ಅನುಭವಿಸಲು ಅಸ್ಪೃಶ್ಯರಾಗಿ ಹುಟ್ಟಿದ್ದಾರೆ. ಈ ಜನ್ಮದಲ್ಲಿ ಅಸ್ಪೃಶ್ಯತೆ ಆಚರಿಸುವವರು ಮುಂದಿನ ಜನ್ಮದಲ್ಲಿ ಅಸ್ಪೃಶ್ಯರಾಗಿ ಹುಟ್ಟುವರು’ ಎಂದು ಜನಜನಿತ ಮಾಡಿದರೆ ನಮ್ಮ ಜಡ ಸಮಾಜವು ಸ್ವಲ್ಪವಾದರೂ ಚಲಿಸಬಹುದಲ್ಲವೇ? ಜನ್ಮ ನಿಜವಿದ್ದರೆ ಆ ಜನ್ಮಾಂತರದ ಕರ್ಮಫಲವನ್ನು ಉಣ್ಣಬೇಕಾದ್ದೂ ನಿಜವಿರಬಹುದಲ್ಲವೇ?

ಏನೇನೋ ಹುಟ್ಟುಹಾಕುವವರು ಇದನ್ನೂ ಯಾಕೆ ಹುಟ್ಟುಹಾಕಬಾರದು?! ಯಾಕೆ ಮಠಾಧೀಶರುಗಳು ಇದನ್ನು ಪ್ರಚಾರ ಮಾಡಬಾರದು? ತಾರತಮ್ಯಕ್ಕಾಗಿ ತರ್ಕಿಸಿ ಸಾಯುವ ಭಾರತದ ಮನಸ್ಸು ಐಕ್ಯತೆಗಾಗಿ ಯಾಕೆ ತರ್ಕಿಸಬಾರದು? ಇದನ್ನೇ ಅಸ್ಪೃಶ್ಯರೊಳಗಿನ ತಾರತಮ್ಯಕ್ಕೂ- ಈ ಜನ್ಮದಲ್ಲಿ ಯಾರನ್ನಾದರು ಕೀಳಾಗಿ ಕಂಡಿದ್ದರೆ ಮುಂದಿನ ಜನ್ಮದಲ್ಲಿ ಕೀಳಾಗಿ ಹುಟ್ಟಿಯೇ ಕರ್ಮಫಲವನ್ನು ಕಳೆದುಕೊಳ್ಳಬೇಕಾಗುತ್ತದೆ- ಎಂಬಲ್ಲಿಯವರೆಗೂ ವ್ಯಾಪಿಸಬಹುದು.

ಸುಸ್ತಾಗುತ್ತಿದೆ. ಯಾಕೋ ಮುಗಿಯುತ್ತಿಲ್ಲ. ಪ್ರೀತಿ-ಸಮಾನತೆಯ ಆಸೆ ಇಟ್ಟುಕೊಂಡು ಇತಿಹಾಸಕಾಲದಿಂದಲೂ ಜೀವಿಸುತ್ತಿದ್ದೇವೆ. ಪೇಜಾವರಶ್ರೀಗಳ ಪಾದಯಾತ್ರೆಯಿಂದಾಗಿ ಕೆಲವರಾದರೂ ಎಳೆಯ ದ್ವಿಜರು ತ್ರಿಜರಾಗಿ ತ್ರಿಜತ್ವ ಪಡೆದು ತಮ್ಮದಲ್ಲದ ಜಾತಿಯಲ್ಲಿ ಮದುವೆಯಾಗಿ ಹೊಸ ಮನುಷ್ಯ ಸಂತಾನ ಹುಟ್ಟಲು ಶ್ರೀ ಪೇಜಾವರರ ಈ ಪಾದಯಾತ್ರೆ ಪ್ರಚೋದನೆಯನ್ನು ಉಂಟು ಮಾಡಲಿ ಎಂದು ಕನಸು ಕಾಣುವೆ. ನನ್ನ ಕನಸು ನನಸಾಗಲಿ.

“ಕುವೆಂಪು ಅವರ ಸಂದರ್ಶನವೊಂದರಲ್ಲಿ ಶ್ರೀಕೃಷ್ಣ ಆಲನಹಳ್ಳಿಯವರು ಕುವೆಂಪು ಅವರಿಗೆ ಒಂದು ಪ್ರಶ್ನೆ ಕೇಳಿದರು- ‘ಮಧ್ವಸಿದ್ಧಾಂತ ನೀಚ ಸಿದ್ಧಾಂತವೇ ಸರ್?’ ಅಂತ. ಅದಕ್ಕೆ ಕುವೆಂಪು- ‘ನೀಚ? ಪರಮ ನೀಚ’ ಅಂದರು. ಆಲನಹಳ್ಳಿ ನಕ್ಕೂ ನಕ್ಕೂ ಆ ನಗುವಿನ ಅಲೆ ನನ್ನ ಕಿವಿಯಲ್ಲಿ ಇನ್ನೂ ಇದೆ.”

(‘ಎದೆಗೆ ಬಿದ್ದ ಅಕ್ಷರ’ ಸಂಕಲನದಿಂದ ಆಯ್ದ ಒಂದು ಬರಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ

Published

on

mysuru-dasara-elephants-srikanta-5790-kg-ekalavya-elephant-weight
Mysuru Dasara Elephants: 5,790 ಕೆಜಿ ತೂಕದ ಶ್ರೀಕಂಠ ನಂಬರ್ 1; ಗಜಪಡೆಯ ಆನೆಗಳ ತೂಕ ಎಷ್ಟು?

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.

ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.

ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ

  • ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಮೊದಲ ಸ್ಥಾನ
  • ಏಕಲವ್ಯ 5,600 ಕೆಜಿ ತೂಕದೊಂದಿಗೆ ಎರಡನೇ ಸ್ಥಾನ
  • ಮೊದಲ ಹಂತದಲ್ಲಿ ಒಟ್ಟು 9 ಆನೆಗಳಿಗೆ ತೂಕ ಪರೀಕ್ಷೆ
  • ಆನೆಗಳ ತೂಕದ ಆಧಾರದ ಮೇಲೆ ಆಹಾರ ಮತ್ತು ತಾಲೀಮು ನಿರ್ಧಾರ
  • ಅಂತಿಮ ತಾಲೀಮಿನ ಬಳಿಕವೇ ಚಿನ್ನದ ಅಂಬಾರಿ ಆನೆ ಆಯ್ಕೆ

http://Visit : www.suddidina.com

ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ

ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.

9 ಆನೆಗಳ ತೂಕದ ಆಧಾರದಲ್ಲೇ ಆಹಾರ

ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.

ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.

ಅಂಬಾರಿ ಆನೆ ಯಾರು? ಕುತೂಹಲ

ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್‌ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ

ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್‌ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”

                                                   – ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್‌ 

ದಸರಾ ಗಜಪಡೆಯ ತೂಕದ ವಿವರ

  • ಶ್ರೀಕಂಠ: 5,790 ಕೆಜಿ
  • ಏಕಲವ್ಯ: 5,600 ಕೆಜಿ
  • ಧನಂಜಯ: 5,530 ಕೆಜಿ
  • ಮಹೇಂದ್ರ: 5,490 ಕೆಜಿ
  • ಪ್ರಶಾಂತ: 5,205 ಕೆಜಿ
  • ಗೋಪಿ: 5,170 ಕೆಜಿ
  • ಶ್ರೀರಾಮ: 4,820 ಕೆಜಿ
  • ಲಕ್ಷ್ಮೀ: 3,990 ಕೆಜಿ
  • ಕಾವೇರಿ: 3,075 ಕೆಜಿ
Continue Reading

ದಿನದ ಸುದ್ದಿ

ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!

Published

on

bengaluru-koodlugate-snn-raj-eternia-18-floor-building-demolition
ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ

ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ


ಸುದ್ದಿದಿನ,ಬೆಂಗಳೂರು:
ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್‌ ಎಸ್ಟೇಟ್‌ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್‌ ರಾಜ್‌ ಕಾರ್ಪ್‌ ಸಂಸ್ಥೆಯು ಎಚ್‌ಎಸ್‌ಆರ್‌ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್‌ ರಾಜ್‌ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್‌ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.

₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ

ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ

ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್‌ ಅಪಾರ್ಟ್‌ಮೆಂಟ್‌ ನಿರ್ದೇಶಕ ಅನೂಜ್‌ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.

ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣ

ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್‌ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.

ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

Continue Reading
Advertisement

Title

ದಿನದ ಸುದ್ದಿ1 hour ago

ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್‌ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್‌ನಲ್ಲೂ ಲಭ್ಯ

ಸುದ್ದಿದಿನ,​ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯೊಂದಿಗೆ ಎರಡು...

ದಿನದ ಸುದ್ದಿ1 day ago

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ...

ದಿನದ ಸುದ್ದಿ2 days ago

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ...

ಅಂತರಂಗ2 weeks ago

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು...

ದಿನದ ಸುದ್ದಿ2 weeks ago

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌...

ದಿನದ ಸುದ್ದಿ4 weeks ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ1 month ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ1 month ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ1 month ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ1 month ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

Trending