ರಾಜಕೀಯ
ದೇವರಾಜ್ ಅರಸು ‘ಕನಸು ನನಸು ಮಾಡಿದರು ಸಿದ್ದರಾಮಯ್ಯ’ : ದಿನೇಶ್ ಗುಂಡೂರಾವ್
ಸುದ್ದಿದಿನ ಡೆಸ್ಕ್ : ಅರಸು ಅವರ ಅನೇಕ ಕನಸುಗಳನ್ನು ನನಸು ಮಾಡಿದವರು ಮಾಜಿ ಸಿಎಂ ಸಿದ್ದರಾಮಯ್ಯ. ಇಂತಹ ಸಂದರ್ಭದಲ್ಲಿ ನಾವು ಸುಳ್ಳು ವದಂತಿ, ಪ್ರಚಾರಕ್ಕೆ ಓಳಗಾಗಬಾರದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಬಿಜೆಪಿಯವರು ಇತಿಹಾಸವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ.ಬೋಪೋರ್ಸ್ ಹಗರಣದ ಬಗ್ಗೆ ಮಾತಾಡ್ತಿದ್ರು ಆದ್ರೆ ಈಗ ತಮ್ಮ ರೆಫೆಲ್ ಹಗರಣದ ಬಗ್ಗೆ ಏನು ಮಾತಾಡಲ್ಲ.ಸುಪ್ರೀಂ ಕೋರ್ಟ್ ಇದೆಲ್ಲವನ್ನೂ ಗಮನಿಸುತ್ತಿದೆ. ಮೋದಿ ಪ್ರಧಾನಿ ಆದಮೇಲೆ ಏನೋ ಕೆಲಸ ಮಾಡ್ತಾರೆ ಅಂತಾ ನಾವು ಅಂದುಕೊಂಡಿದ್ವಿ, ಆದ್ರೆ ಆಡಳಿತ ನೋಡಿದ್ರೆ ಏನು ಮಾಡಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಸಿಬಿಐ ಅಧಿಕಾರಿಗಳನ್ನು ರಾತ್ರೋರಾತ್ರಿ ಟ್ರಾನ್ಸ್ ಫರ್ ಮಾಡ್ತಾರೆ ಅಂದ್ರೆ ಏನು ಅರ್ಥ?
ಸ್ವಾಯತ್ತ ಸಂಸ್ಥೆಗಳನ್ನು ತಮಗೆ ಇಷ್ಟ ಬಂದಂತೆ ಬಳಸಿಕೊಳ್ಳುತ್ತಾರೆ.ಮೋದಿ ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿರುವ ಮೋದಿ ಫ್ಯಾಸಿಸ್ಟ್ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಯಾವೊಂದು ಜನಪರ ಕೆಲಸ ಮಾಡಲಿಲ್ಲ, ಆದರೆ ಬರೀ ಹೆಡ್ ಲೈನ್ ಮಾತ್ರ ಇದೆ. ಮೋದಿ ಅವರನ್ನು ನಾವು ಮುಂದಿನ ದಿನಗಳಲ್ಲಿ ತಗಿಯದೇ ಹೋದ್ರೆ ಈ ದೇಶ ಉಳಿಯಲ್ಲ.ಈ ದೇಶ ಉಳಿಸಲು ನಾವೆಲ್ಲ ಒಂದಾಗಬೇಕು. ಕೇಂದ್ರ ಸರ್ಕಾರವು ಮಾಧ್ಯಮ, ಕೋರ್ಟ್, ಅಧಿಕಾರಿಗಳನ್ನು ಕಂಟ್ರೋಲ್ ಮಾಡ್ತಿದ್ದಾರೆ ಎಂದು ದೂರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಸ್ಮಾರ್ಟ್ ಟಿ.ವಿ ಖರೀದಿಯಲ್ಲಿ ಅವ್ಯವಹಾರ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಡಿ.ಡಿ ರಾಜನಾಯ್ಕ ಸೇರಿ 5 ಜನ ಸಿ.ಡಿ.ಪಿ.ಒ ಗಳ ವಿರುದ್ಧ ಲೋಕಾಗೆ ದೂರು|
ದಾವಣಗೆರೆ, ಸುದ್ದಿದಿನ; 2025-26ನೇ ಸಾಲಿನಲ್ಲಿ ದಾವಣಗೆರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ ನಡೆದಿರುವ ಸ್ಮಾರ್ಟ್ ಟಿವಿ ಖರೀದಿಯ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನಿಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ತಾಲ್ಲೂಕುಗಳ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ವ್ಯಾಪ್ತಿಗೆ ಒಳಪಟ್ಟಿರುವ ಅಂಗನವಾಡಿ ಕೇಂದ್ರಗಳಲ್ಲಿ ಸ್ಥಾಪನೆಯಾಗಿರುವ ಎಲ್.ಕೆ.ಜಿ ಹಾಗೂ ಯು.ಕೆ.ಜಿ ತರಗತಿಗಳಿಗೆ 2025-26ನೇ ಸಾಲಿನಲ್ಲಿ ಸ್ಮಾರ್ಟ್ ಟಿವಿಗಳನ್ನು ಖರೀದಿಸಿದ್ದು, ಸದರಿ ಖರೀದಿ ವ್ಯವಹಾರದಲ್ಲಿ ಕೆ.ಟಿ.ಪಿ.ಪಿ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನಿಗದಿಪಡಿಸಿರುವ ಮಾಹಿತಿ ಆಧಾರದ ಮೇಲೆ ಎಲ್ಲಾ ತಾಲ್ಲೂಕುಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಲೋಪಗಳು ಕಂಡುಬಂದಿರುತ್ತವೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರತಿ ತಾಲ್ಲೂಕಿಗೆ 16 ಸ್ಮಾರ್ಟ್ ಟಿವಿಗಳನ್ನು ಏರ್‌ವೇವ್ಸ್ ಕಮ್ಯೂನಿಕೇಶನ್ಸ್, ಬೆಂಗಳೂರು ಇವರಿಂದ ರೂ. 4,99.999/- ಮೊತ್ತದಲ್ಲಿ ಖರೀದಿ ಮಾಡಲಾಗಿರುತ್ತದೆ. ಪ್ರತಿ ತಾಲ್ಲೂಕಿಗೆ ರೂ. 4,99,999/- ಗಳಂತೆ ಒಟ್ಟು 5 ತಾಲ್ಲೂಕುಗಳಿಂದ ಅಂದಾಜು 25 ಲಕ್ಷ ಮೊತ್ತದ ಖರೀದಿ ವ್ಯವಹಾರವನ್ನು ಒಂದೇ ಏಜೆನ್ಸಿಯಿಂದ ಒಂದೇ ದಿನಾಂಕದಲ್ಲಿ ನಡೆಸಿದ್ದರೂ ಕೆ.ಟಿ.ಪಿ.ಪಿ ನಿಯಮಾನುಸಾರ ಯಾವುದೇ ಟೆಂಡರ್ ಪ್ರಕ್ರಿಯೆಯನ್ನು ನಡೆಸಿರುವುದಿಲ್ಲ. ಬಹುತೇಕ ತಾಲ್ಲೂಕುಗಳ ಜಿ.ಎಸ್.ಟಿ ಬಿಲ್ಲಿನಲ್ಲಿ ದಿನಾಂಕವೇ ಇರುವುದಿಲ್ಲ. ಇನ್ನೂ ಕೆಲವು ಬಿಲ್ಲುಗಳಲ್ಲಿ ದಿನಾಂಕವನ್ನು ಕೈಬರಹದಿಂದ ನಮೂದಿಸಲಾಗಿರುತ್ತದೆ. ಹೀಗಾಗಿ ಸದರಿ ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಬಾಹಿರವಾಗಿರುತ್ತದೆ.
ಈ ಪ್ರಕರಣದ ಖರೀದಿ ವ್ಯವಹಾರದಲ್ಲಿ ಭಾಗಿಯಾಗಿರುವ 1. ರಾಜಾನಾಯ್ಕ್, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆ, ದಾವಣಗೆರೆ. 2. ಅಭಿಕುಮಾರ್ ಜಿ.ಎಸ್., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ದಾವಣಗೆರೆ ತಾಲ್ಲೂಕು, 3. ಪ್ರಿಯದರ್ಶಿನಿ ಇ.ವೈ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹರಿಹರ ತಾಲ್ಲೂಕು. 4. ನಿರ್ಮಲ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಚನ್ನಗಿರಿ ತಾಲ್ಲೂಕು 5. ಬೀರೇಂದ್ರ ಕುಮಾರ ಎಂ.ಪಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಗಳೂರು ತಾಲ್ಲೂಕು. 6. ಜ್ಯೋತಿ ಎಸ್.ಎಸ್., ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹೊನ್ನಾಳಿ ತಾಲ್ಲೂಕು ಇವರುಗಳ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ಚನ್ನಗಿರಿ | ಕೊರಟಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿ.ಡಿ.ಓ ಶಿವಕುಮಾರ, ಇ.ಒ ಪ್ರಕಾಶ್ ವಿರುದ್ಧ ಲೋಕಾಗೆ ದೂರು
ದಾವಣಗೆರೆ, ಸುದ್ದಿದಿನ; ದಾವಣಗೆರೆ ಜಿಲ್ಲಾ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸಿನ ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ನಡೆದಿರುವ ಕಾಮಗಾರಿ ಮತ್ತು ಖರೀದಿಯಲ್ಲಿನ ಅವ್ಯವಹಾರವನ್ನು ಸೂಕ್ತ ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಎಂ.ಆರ್ ಹಾಗೂ ಅವ್ಯವಹಾರದಲ್ಲಿ ಭಾಗಿಯಾಗಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜಿ ಶಿವಕುಮಾರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕೊರಟಿಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ ಇಲ್ಲಿಗೆ 15ನೇ ಹಣಕಾಸು ಯೋಜನೆಯ ಅಡಿಯಲ್ಲಿ ಬಿಡುಗಡೆಯಾದ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ಮಾಹಿತಿಯ ಮೇರೆಗೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯಾಲಯ, ಕೊರಟಿಕೆರೆ ಚನ್ನಗಿರಿ ತಾಲ್ಲೂಕು ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಲಾಗಿದ್ದು, ಅರ್ಜಿದಾರರು ಹಣ ಪಾವತಿಸಿದರೂ ನಿಗಧಿತ ಕಾಲಾವಧಿಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮಾಹಿತಿ ನೀಡದ ಕಾರಣ ಇ-ಗ್ರಾಮ ಸ್ವರಾಜ್ ಮೂಲಕ ಮಾಹಿತಿ ಪಡೆದು ದಿನಾಂಕ: 03-10-2026 ರಂದು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಗಿರಿ ಇವರಿಗೆ ದೂರು ನೀಡಿ ಇಲಾಖಾ ತನಿಖೆಗೆ ಒಳಪಡಿಸುವಂತೆ ಕೋರಲಾಗಿತ್ತು. ನಿಗಧಿತ ಕಾಲಾವಧಿ ಮುಕ್ತಾಯವಾದರೂ ಯಾವುದೇ ತನಿಖೆ ನಡೆಸದ ಕಾರಣ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಿನದ ಸುದ್ದಿ
ನೀತಿ ಸಂಹಿತೆ ಉಲ್ಲಘನೆ, ಬೋಧನೆ ಶೂನ್ಯ ; ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಲೇಪಾಕ್ಷ ವಿರುದ್ಧ ದೂರು
ದಾವಣಗೆರೆ,ಸುದ್ದಿದಿನ: ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಇಲ್ಲಿನ ಸಮಾಜಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಲೇಪಾಕ್ಷ ಎಸ್.ಆರ್ ಇವರು ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹಾಜರಾಗದೆ ಇರುವುದು ಮಾತ್ರವಲ್ಲದೆ ವೇಳಾಪಟ್ಟಿಯಂತೆ ಇವರಿಗೆ ನಿಗಧಿಪಡಿಸಿದ ಯಾವುದೇ ತರಗತಿಗಳನ್ನು ತೆಗೆದುಕೊಳ್ಳದೆ ರಾಜಕೀಯ ಪಕ್ಷವೊಂದರ ಪ್ರಚಾರ ಹಾಗೂ ಸ್ಥಳೀಯ ರಾಜಕಾರಣದಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವ ನಡೆಯನ್ನು ಸೂಕ್ತ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಜಂಟಿ ನಿರ್ದೇಶಕರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.
ಡಾ. ಲೇಪಾಕ್ಷ ಎಸ್.ಆರ್ ಇವರನ್ನು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ತರಗತಿಗಳನ್ನು ಹಂಚಿಕೆ ಮಾಡಿದ್ದು, ಯಾವುದೇ ತರಗತಿಗಳನ್ನು ತೆಗೆದುಕೊಳ್ಳದ ಮಾಹಿತಿಯ ಮೇರೆಗೆ ಕಾಲೇಜಿನಲ್ಲಿ ಅಳವಡಿಸಿದ ಸಿ.ಸಿ.ಟಿ.ವಿ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ನೀಡುವಂತೆ ಮಾಹಿತಿ ಕೋರಿದ್ದು, ಕಾಲೇಜಿನ ಪ್ರಾಂಶುಪಾಲರು ಕಾಲೇಜಿಗೆ ಸರಿಯಾಗಿ ಹಾಜರಾಗದ ಮತ್ತು ಬೋದನೆ ಮಾಡದ ಅಧ್ಯಾಪಕರನ್ನು ರಕ್ಷಿಸುವ ಸಲುವಾಗಿ ನಿಯಮಬಾಹಿರವಾಗಿ ಹಿಂಬರಹ ನೀಡಿರುತ್ತಾರೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ, ಲೇಪಾಕ್ಷ ಇವರು ರಾಜಕೀಯ ಪಕ್ಷದ ಪ್ರಚಾರ ಮತ್ತು ಸಂಭ್ರಮದಲ್ಲಿ ಭಾಗಿಯಾಗಿರುವ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ದಾಖಲೆಗಳನ್ನು ಲಗತ್ತಿಸಿ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಚಿವರಿಗೆ ದೂರು ನೀಡಿರುತ್ತಾರೆ.

-
ದಿನದ ಸುದ್ದಿ3 days agoನೀತಿ ಸಂಹಿತೆ ಉಲ್ಲಘನೆ, ಬೋಧನೆ ಶೂನ್ಯ ; ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಲೇಪಾಕ್ಷ ವಿರುದ್ಧ ದೂರು
-
ದಿನದ ಸುದ್ದಿ4 days agoಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಕಲಿ ಬಿಲ್ಲುಗಳ ಹಾವಳಿ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ಜಂಟಿ ನಿರ್ದೇಶಕ ಸೇರಿ 4 ಜನ ಪ್ರಾಂಶುಪಾಲರ ವಿರುದ್ಧ ಲೋಕಾಗೆ ದೂರು
-
ಅಂತರಂಗ6 days agoಕವಿತೆ | ಒಂಟಿಯಾನದ ಸರಕು
-
ದಿನದ ಸುದ್ದಿ3 days agoಮಂಗಳೂರು | ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಕೆ.ಆರ್ ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoರಕ್ತದಾನದಿಂದ ಜೀವ ಉಳಿಸಿ, ಶ್ರವಣ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ7 days agoಕಾರಾಗೃಹಗಳ ಇಲಾಖೆ ನೇಮಕಾತಿ ಪರೀಕ್ಷೆ : 4,697 ಅಭ್ಯರ್ಥಿಗಳು ಹಾಜರು
-
ದಿನದ ಸುದ್ದಿ2 days agoಚನ್ನಗಿರಿ | ಕೊರಟಿಕೆರೆ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ | ಪಿ.ಡಿ.ಓ ಶಿವಕುಮಾರ, ಇ.ಒ ಪ್ರಕಾಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ19 hours agoಕನಕದಾಸರ ಕೀರ್ತನೆ ತತ್ವಗಳು ಸಾರ್ವಕಾಲಿಕ : ಸಚಿವ ಕೆ ಎಸ್ ಬಸಂತಪ್ಪ

