ದಿನದ ಸುದ್ದಿ
ವಾಜಪೇಯಿ ಶ್ರೇಷ್ಠ ನಾಯಕ, ಸಂಸದೀಯ ಪಟು; ಅವರ ಸ್ಥಾನ ಯಾರಿಂದಲೂ ತುಂಬಲು ಆಗದು | ದೇವೇಗೌಡ
ಸುದ್ದಿದಿನ ಡೆಸ್ಕ್ | ವಾಜಪೇಯಿ ಅವರು ನಿಧನ ಸುದ್ದಿ ಕೇಳ ಆಘಾತ ಆಗಿದೆ ,, ಪ್ರಧಾನ ಮಂತ್ರಿಯಾಗಿ ದೇಶಕ್ಕೆ ಅಪಾರ ಸೇವೆ ಮಾಡಿದ್ದಾರೆ ,, ಅವರೊಬ್ಬ ಶ್ರೇಷ್ಟ ನಾಯಕ, ಸಂಸದೀಯ ಪಟು ,, ಅವರ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಷಾದ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ಶತ್ರುವನ್ನೂ ಕೂಡ ಕಟುವಾದ ಶಬ್ಧದಿಂದ ಟೀಕಿಸಿದವರಲ್ಲ. ನಾನು ಪ್ರಧಾನಿಯಾಗಿ ರಾಜೀನಾಮೆ ಕೊಡುವ ವೇಳೆ ದೂರವಾಣಿ ಮುಖೇನ ಅಧಿಕಾರ ಉಳಿಸಿಕೊಡುತ್ತೇನೆ ಎಂದು ಹೇಳಿದ್ರು ರಾಜಕಾರಣದಲ್ಲಿ ಅತ್ಯಂತ ಎತ್ತರಕ್ಕೆ ಬೆಳೆದವರು. ಪಾಕಿಸ್ತಾನದ ಸಂಬಂಧ ಕುದುರಿಸಲು ಲಾಹೋರ್ ಗೆ ಬಸ್ ಯಾತ್ರೆ ಮಾಡಿದ್ರು ,, ಮುಷ್ರಪ್ ಅವರನ್ನು ಕರೆಸಿ ಎಲ್ಲ ರೀತಿಯ ಪ್ರಯತ್ನ ಮಾಡಿದ್ರು ,, ಆದ್ರೆ ಸಫಲವಾಗಲಿಲ್ಲ ,, ಶಾಂತೀಯತೆ ಕಾಪಾಡಲು ಪ್ರಯತ್ನ ಮಾಡಿದ್ರು ,, ಜೊತೆಗೆ ನಮ್ಮ ಸೈನಿಕರ ಸಾಮರ್ಥ್ಯವನ್ನೂ ತೋರಿಸಿಕೊಟ್ಟಿದ್ದಾರೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದರು.
ರಾಜ್ಯ, ರಾಷ್ಟ್ರದ ಆಡಳಿತ ಹೇಗೆ ನಡೆಸಬೇಕು ಎಂದು ಗೋದ್ರಾ ಪ್ರಕರಣ ಆದಾಗ ಅಂದಿನ ಸಿಎಂ ಮೋದಿ ಅವರಿಗೆ ರಾಜಧರ್ಮ ಪಾಲನೆ ಮಾಡಿಲ್ಲ ಎಂದು ಕಠಿಣವಾಗಿ ಹೇಳಿದ್ರು ,, ತಮ್ಮ ಪಕ್ಷದ ಸಿಎಂ ಆಗಿದ್ರೂ ಅಂತಮಾತು ಹೇಳಿದ್ದು ಅವರ ವ್ಯಕ್ತಿತ್ವ ಎಂತದ್ದು ಎಂದು ತೋರಿಸುತ್ತದೆ. ಪ್ರತಿ ವರ್ಷ ಜನೆವರಿಯಲ್ಲಿ ಅವರ ಮನೆಗೆ ಹೋಗಿ ಬರ್ತಿದ್ದೆ. ರಾಜಕೀಯದಲ್ಲಿ ಯಾವುದೇ ಧರ್ಮ ಜಾತಿಗೆ ನೋವುಉಂಟುಮಾಡಬಾರದು ಎನ್ನುವುದಕ್ಕೆ ಗೋದ್ರಾ ಪ್ರಕರಣದಲ್ಲಿ ಅವರು ನಡೆದುಕೊಂಡ ರೀತಿಯೇ ಸಾಕ್ಷಿ. ಅವರು ಬಹಳ ಸೂಕ್ಷ್ಮ ಸ್ವಭಾವದ ವ್ಯಕ್ತಿ ರಾಮಮಂದಿರ ಕಟ್ಟಲು ಶಿಲೆಗಳನ್ನ ಕಳಿಸಿಕೊಟ್ರು, ಅದನ್ನ ವಾಜಪೇಯಿಯವರೇ ತೆಗೆದುಕೊಳ್ಳಬೇಕು ಎಂದು ವಿಹೆಚ್ ಪಿ ಮುಖಂಡರು ಕಟುವಾಗಿ ಹೇಳಿದ್ರು ಆದ್ರೆ ಪ್ರಧಾನಿಯಾಗಿದ್ದಾಗ ಅವರು ಹೋಗದೇ ಅಧಿಕಾರಿಯನ್ನ ಕಳಿಸಿದ್ರು.
ನಾಳೆ ದೆಹಲಿಗೆ ಹೋಗುತ್ತೇನೆ ಅಜಾತಶತ್ರುವಿಗೆ ಅಂತಿಮ ನಮನ ಸಲ್ಲಿಸುತ್ತೇನೆ.ಯಾರನ್ನೂ ನೋಯಿಸಬಾರದು ಅನ್ನೋ ಮನೋ ಭಾವನೆ ಹೊಂದಿದ್ದರು ವಾಜಪೇಯಿ. ಅವರ ಆತ್ಮಕ್ಕೆ ದೇವರು ಚಿರಶಾಂತಿ ಕೊಡಲಿ. ಅವರ ಸಂಬಂಧಿಕರಿಗೆ ನೋವನ್ನ ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದ ವ್ಯವಸ್ಥೆಗಳನ್ನ ನೋಡಿಕೊಂಡು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


